HomeBreaking NewsLatest NewsPoliticsSportsCrimeCinema

ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ ಸಸ್ಪೆಂಡ್

04:31 PM Oct 27, 2023 IST | prashanth

ಚಿಕ್ಕಮಗಳೂರು ಅಕ್ಟೋಬರ್,27,2023(www.justkannada.in):  ಹುಲಿ ಉಗುರು  ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಸೆಲೆಬ್ರೆಟಿಗಳು ಬೆನ್ನಲ್ಲೇ ರಾಜಕಾರಣಿಗಳು, ಉದ್ಯಮಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಆರೋಪ ಕೇಳಿಬಂದಿದೆ.

ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದ ಡಿಆರ್​ಎಫ್​ಒ ದರ್ಶನ್ ಅವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಕೊಪ್ಪ ಡಿಎಫ್​ಒ ನಂದೀಶ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಡಿಆರ್​ಎಫ್​ಒ ಅವರನ್ನು ದರ್ಶನ್ ಅಮಾನತು ಮಾಡಲಾಗಿದೆ. ಅರಣ್ಯ ಇಲಾಖೆಯ ಕಳಸ ಉಪ ವಲಯ ಅರಣ್ಯಾಧಿಕಾರಿ  ದರ್ಶನ್‌ ಹುಲಿ ಉಗುರಿನ ಪೆಂಡೆಂಟ್​ ಧರಿಸಿದ್ದಾರೆ ತನಿಖೆ ನಡೆಸಿ, ಕ್ರಮಕೈಗೊಳ್ಳಿ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅರೆನೂರು ಗ್ರಾಮದ ಸುಪ್ರೀತ್ ಮತ್ತು ಅಬ್ದುಲ್ ಅವರು ಚಿಕ್ಕಮಗಳೂರು ಜಿಲ್ಲೆ ಆಲ್ದೂರು ವಲಯ ಅರಣ್ಯಾಧಿಕಾರಿಗೆ ಲಿಖಿತ ದೂರು ನೀಡಿದ್ದರು.

Key words: DRFO -Susperand –wearing- tiger claw -pendant

Tags :
DRFO -Susperand –wearing- tiger claw -pendant
Next Article