For the best experience, open
https://m.justkannada.in
on your mobile browser.

ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

06:05 PM Jun 15, 2024 IST | prashanth
ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಬೆಂಗಳೂರು,ಜೂನ್,15,2024 (www.justkannada.in):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್  ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು ಪೊಲೀಸರು ನಟ ದರ್ಶನ್ ಸೇರಿ ಆರೋಪಿಗಳನ್ನ ಕೋರ್ಟ್ ಗೆ ಹಾಜರುಪಡಿಸಿದ್ದರು.

ವಾದ ಪ್ರತಿವಾದ ಆಲಿಸಿದ ಕೋರ್ಟ್ ನಟ ದರ್ಶನ್ ಮತ್ತು ಪವಿತ್ರಾಗೌಡ ಸೇರಿ 13 ಆರೋಪಿಗಳನ್ನ ಜೂನ್ 20 ರವರೆಗೆ ಅಂದರೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಆರೋಪಿಗಳಾದ ನಟ ದರ್ಶನ್ , ಪವಿತ್ರಾಗೌಡ, ಪವನ್,  ರಾಘವೇಂದ್ರ,  ನಂದೀಶ,  ಜಗದೀಶ್ , ಅನುಕುಮಾರ, ವಿನಯ್ ,  ಲಕ್ಷ್ಮಣ್ , ದೀಪಕ್, ಪ್ರದೋಶ್ ಸೇರಿ 13 ಆರೋಪಿಗಳನ್ನ ಕಸ್ಟಡಿಗೆ ನೀಡಲಾಗಿದೆ ಎನ್ನಲಾಗಿದೆ.

Key words: 13 accused, actor, Darshan , police custody

Tags :

.