ಹೃದಯಾಘಾತದಿಂದ 13 ವರ್ಷದ ವಿದ್ಯಾರ್ಥಿನಿ ಸಾವು.
03:09 PM Dec 20, 2023 IST
|
prashanth
ಚಿಕ್ಕಮಗಳೂರು,ಡಿಸೆಂಬರ್,20,2023(www.justkannada.in): ಶಾಲೆಗೆ ತೆರಳುತ್ತಿದ್ದ ವೇಳೆ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದ ಸೃಷ್ಠಿ(13) ಮೃತಪಟ್ಟ ವಿದ್ಯಾರ್ಥಿನಿ. ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಸೃಷ್ಠಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಈ ನಡುವೆ ಶಾಲೆಗೆ ತೆರಳುತ್ತಿದ್ದ ವೇಳೆ ಸೃಷ್ಠಿ ದಿಢೀರ್ ಕುಸಿದು ಬಿದ್ದಿದ್ದಾಳೆ. ಕೂಡಲೇ ಸೃಷ್ಠಿಯನ್ನ ಆಸ್ಪತ್ರೆಗೆ ಸಾಗಿಸಲಾಗಿತ್ತು.
ಆದರೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ವಿದ್ಯಾರ್ಥಿನಿ ಸೃಷ್ಠಿ ಸಾವನ್ನಪ್ಪಿದ್ದು, ಶವ ಪರೀಕ್ಷೆ ನಡೆಸಿದ ವೈದ್ಯರು, ಆಕೆ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ತನ್ನ ವಿದ್ಯಾರ್ಥಿಯನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Key words: 13 year- old- student- died - heart attack.
Next Article