ಕಲ್ಯಾಣ ಕರ್ನಾಟಕ ಭಾಗದಲ್ಲಿ 15 ಸಾವಿರ ಖಾಲಿ ಹುದ್ದೆಗಳ ಭರ್ತಿ- ಸಚಿವ ಶರಣಪ್ರಕಾಶ್ ಪಾಟೀಲ್
ಕಲಬುರ್ಗಿ,ಸೆಪ್ಟಂಬರ್,16,2024 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂದಿನ ಒಂದು ವರ್ಷದ ಅವಧಿಯಲ್ಲಿ 15000 ಖಾಲಿ ಹುದ್ದೆ ತುಂಬಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್, 2013-18 ರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹುದ್ದೆ ತುಂಬಲಾಗುವುದು ನಂತರ ಎರಡು ವರ್ಷದ ಅವಧಿಯಲ್ಲಿ 25,000 ಹುದ್ದೆ ತುಂಬಲಾಗುವುದು ಎಂದು ಹೇಳಿದರು.
ನಮ್ಮ ಸರ್ಕಾರದ ಅವಧಿ ಮುಗಿಯುವದರೊಳಗೆ 50,000 ಖಾಲಿಹುದ್ದೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ ಸಿಎಂ ಭರವಸೆ ನೀಡಿದ್ರು ಅದಕ್ಕೆ ಬದ್ಧವಾಗಿದ್ದೇವೆ ಎಂದರು.
ಬಿಜೆಪಿಯವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರು ಸಕರಾತ್ಮಕ ರಾಜಕೀಯ ಮಾಡದೆ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮತ್ತು ಸತ್ಯಕ್ಕೆ ಸಂಬಂಧವೇ ಇಲ್ಲ ಎಂದು ಶರಣ ಪ್ರಕಾಶ್ ಪಾಟೀಲ್ ಕುಟುಕಿದರು.
Key words: 15,000 vacancies, fill, kalyana Karnataka, Minister, Sharanprakash Patil