For the best experience, open
https://m.justkannada.in
on your mobile browser.

ಕಂದಕಕ್ಕೆ ಬಸ್ ಉರುಳಿ 21 ಮಂದಿ ಸಾವು: 40ಕ್ಕೂ ಹೆಚ್ಚು ಜನರಿಗೆ ಗಾಯ

06:12 PM May 30, 2024 IST | prashanth
ಕಂದಕಕ್ಕೆ ಬಸ್ ಉರುಳಿ 21 ಮಂದಿ ಸಾವು  40ಕ್ಕೂ ಹೆಚ್ಚು ಜನರಿಗೆ ಗಾಯ

ಜಮ್ಮು ಕಾಶ್ಮೀರ,ಮೇ,30,2024 (www.justkannada.in): ಕಂದಕಕ್ಕೆ ಬಸ್ ಉರುಳಿ 21 ಮಂದಿ ಸಾವನ್ನಪ್ಪಿ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಜಮ್ಮುಕಾಶ್ಮೀರದ ಅಖ್ನೂರ್ ಬಳಿ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಖ್ನೂರ್ ಪ್ರದೇಶದ ಜಮ್ಮು ಪೂಂಚ್ ಹೆದ್ದಾರಿಯ ತಾಂಡಾ ಮೋರ್‌ ನಲ್ಲಿ ಆಳವಾದ ಕಮರಿಗೆ ಬಸ್ ಉರುಳಿದೆ ಎನ್ನಲಾಗಿದೆ . ಘಟನೆಯಲ್ಲಿ 21 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತಪಟ್ಟವರು ಉತ್ತರ ಪ್ರದೇಶದ ಹತ್ರಾಸ್ ಮೂಲದವರು ಎಂದು ಹೇಳಲಾಗುತ್ತಿದೆ.

ಬಸ್‌ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನ ಪ್ರಯಾಣಿಕರು ಜಮ್ಮುವಿನಿಂದ ರಿಯಾಸಿ ಜಿಲ್ಲೆಯ ಶಿವ ಖೋರಿ ದೇಗುಲಕ್ಕೆ ಪ್ರಯಾಣಿಸುತ್ತಿದ್ದರು. ಜಮ್ಮು-ಪೂಂಚ್ ಹೆದ್ದಾರಿಯ ಕಾಳಿ ಧಾರ್ ಮಂದಿರದ ಬಳಿ ಬಸ್ ಕಮರಿಗೆ ಬಿದ್ದು ಭೀಕರ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಅಖ್ನೂರ್‌ನ ಸ್ಥಳೀಯ ಆಸ್ಪತ್ರೆಗೆ ಮತ್ತು ಜಮ್ಮುವಿನ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

Key words: 21 dead, bus, falls, into, ditch

Tags :

.