25 ನೇ ವರ್ಷದ ಕಾರ್ಗಿಲ್ ವಿಜಯ ದಿವಸ : ಹುತಾತ್ಮ ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ
ನವದೆಹಲಿ,ಜುಲೈ,26,2024 (www.justkannada.in): ಇಂದು 25ನೇ ವರ್ಷದ ಕಾರ್ಗಿಲ್ ವಿಜಯ ದಿವಸವಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದ್ರಾಸ್ ಗೆ ಭೇಟಿ ನೀಡಿ ಹುತಾತ್ಮ ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸಿದರು.
ದ್ರಾಸ್ ನಲ್ಲಿರುವ ಹುತಾತ್ಮ ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ ಸಲ್ಲಿಸಿ ಯೋಧರ ತ್ಯಾಗ ಬಲಿದಾನ ಸ್ಮರಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ದೇಶಕ್ಕಾಗಿ ಜೀವತೆತ್ತ ಯೋಧರನ್ನ ಎಂದಿಗೂ ಮರೆಯಬಾರದು ವೀರ ಯೋಧರ ತ್ಯಾಗ ಬಲಿದಾನಕ್ಕೆ ಬೆಲೆ ಕಟ್ಟಲು ಆಗಲ್ಲ. ದೇಶಕ್ಕಾಗಿ ಹೋರಾಡಿದ ಯೋಧರು ಜನರ ಮನಸ್ಸಿನಲ್ಲಿ ಇರುತ್ತಾರೆ ಎಂದರು.
1999 ಜುಲೈ 26ರಂದು ಭಾರತೀಯ ಸೈನಿಕರು ಅಪರೇಶನ್ ವಿಜಯ್ ಮೂಲಕ ಕಾರ್ಗಿಲ್-ಡ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಕಾರ್ಗಿಲ್ ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ. ಪಾಕಿಸ್ತಾನದ ವಿರುದ್ದದ ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯ ಪತಾಕೆಯನ್ನು ಹಾರಿಸಿ 25 ವರ್ಷ ತುಂಬಿದೆ. ಯುದ್ಧದಲ್ಲಿ ಹುತಾತ್ಮರಾದ ಸೈನಿಕರನ್ನು ಸ್ಮರಿಸಲು ದೇಶವು ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತದೆ.
Key words: 25 years, Kargil Victory Day, PM Modi, martyrs