31 ವರ್ಷದ ಹಿಂದಿನ ಕೇಸ್ ಗೆ ಮರುಜೀವ: ಹಿಂದೂ ಕಾರ್ಯಕರ್ತರನ್ನ ಟಾರ್ಗೆಟ್ ಮಾಡಿಲ್ಲ ಎಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್.
ಬೆಂಗಳೂರು,ಜನವರಿ,1,2024(www.justkannada.in): 31 ವರ್ಷದ ಹಿಂದಿನ ರಾಮಜನ್ಮಭೂಮಿ ಹೋರಾಟದ ಪ್ರಕರಣಕ್ಕೆ ಮರುಜೀವ ಬಂದಿದ್ದು, ಈ ಸಂಬಂಧ ಈಗಾಗಲೇ 3ನೇ ಆರೋಪಿ ಶ್ರೀಕಾಂತ್ ಪೂಜಾರಿ ಎಂಬುವವರನ್ನ ಬಂಧಿಸಲಾಗಿದೆ. ಈ ಸಂಬಂಧ ಸರ್ಕಾರ ರಾಮಭಕ್ತರ ಮೇಲೆ ಸರ್ಕಾರ ದ್ವೇಷ ಸಾಧಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದು ಇದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹಳೆಯ ಎಲ್ಲಾ ಕೇಸ್ ಗಳನ್ನ ಕ್ಲಿಯರ್ ಮಾಲಾಗುತ್ತಿದೆ . ಹುಬ್ಬಳ್ಳಿಯಲ್ಲಿ 32 ಕೇಸ್ ಗಳೂ ಬಾಕಿ ಇವೆ. ಹುಬ್ಬಳ್ಳಿಯಲ್ಲಿ ಪ್ರಕರಣಕ್ಕೂ ಜೀವ ಬಂದಿದೆ. ಬೇರೆ ಯಾವುದೇ ಉದ್ದೇಶ ಇಟ್ಟುಕೊಂಡಿಲ್ಲ.
ಹಿಂದೂ ಕಾರ್ಯಕರ್ತರನ್ನ ಟಾರ್ಗೆಟ್ ಮಾಡಿಲ್ಲ ಕಾನೂನು ಪ್ರಕಾರ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಇದಕ್ಕೆ ಕೋಮುಬಣ್ಣ ಕಟ್ಟುವುದು ಸೂಕ್ತವಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ಕರಸೇವೆಗೂ ಮುನ್ನ ಅಂದರೆ ಡಿಸೆಂಬರ್ 5, 1992 ರಂದು ಹುಬ್ಬಳ್ಳಿ ನಗರದಲ್ಲಿ ಗಲಭೆ ಸಂಭವಿಸಿದ್ದು, ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರ ವಿರುದ್ಧ ಹುಬ್ಬಳ್ಳಿಯ ಶಹರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸದ್ಯ ಈ ಹಳೆ ಪ್ರಕರಣಕ್ಕೆ ಮರುಜೀವ ಕೊಡಲು ಹುಬ್ಬಳ್ಳಿ ಪೊಲೀಸರು ಮುಂದಾಗಿದ್ದಾರೆ.
Key words: 31year-old case: Hindu activists- not targeted-Minister-Dr. G. Parameshwar.