For the best experience, open
https://m.justkannada.in
on your mobile browser.

ರಾಜ್ಯದ 4.40 ಕೋಟಿ  ಜನರಿಗೆ ಪಂಚ ಗ್ಯಾರಂಟಿ ಯೋಜನೆ ಪ್ರಯೋಜನ- ಕಾಂಗ್ರೆಸ್ ಟ್ವೀಟ್

01:59 PM Aug 16, 2024 IST | prashanth
ರಾಜ್ಯದ 4 40 ಕೋಟಿ  ಜನರಿಗೆ ಪಂಚ ಗ್ಯಾರಂಟಿ ಯೋಜನೆ ಪ್ರಯೋಜನ  ಕಾಂಗ್ರೆಸ್ ಟ್ವೀಟ್

ಬೆಂಗಳೂರು,ಆಗಸ್ಟ್,16,2024 (www.justkannada.in): ಕೋಟ್ಯಾಂತರ ಕುಟುಂಬಗಳಿಗೆ ಪಂಚ ಗ್ಯಾರಂಟಿ ಯೋಜನೆಗಳು ಜೀವನಾಧಾರವಾಗಿವೆ. ಹೀಗಾಗಿ ಗ್ಯಾರಂಟಿ ಯೋಜನೆಗಳಲ್ಲಿ ನಿಲ್ಲುವುದಿಲ್ಲ  ಎಂದು ರಾಜ್ಯ ಕಾಂಗ್ರೆಸ್ ಅಧಿಕೃತವಾಗಿ ತಿಳಿಸಿದೆ.

ಈ ಕುರಿತು ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ,  ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗ್ಯಾರಂಟಿ ಯೋಜನೆಗಳು ರಾಜ್ಯದ ಕೋಟ್ಯಂತರ ಕುಟುಂಬಗಳಿಗೆ ಜೀವನಾಧಾರವಾಗಿವೆ. 4.40 ಕೋಟಿ ಜನರಿಗೆ ಈ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ. ಹೀಗಿದ್ದರೂ ಅನಾವಶ್ಯಕವಾಗಿ ಕೆಲವು ಸಚಿವರು ಮಾತನಾಡುತ್ತಿರುವುದು ಸರಿಯಲ್ಲ. ಅದೇನೇ ಇದ್ದರೂ ಮುಖ್ಯಮಂತ್ರಿಗಳು ಮತ್ತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿ ಹೇಳಿಕೆ ನೀಡಬೇಕು ಎಂದು ಎಂದು ಕಾಂಗ್ರೆಸ್ ತಿಳಿಸಿದೆ.

Key words: 4.40 crore, people, benefit, Guarantee scheme, Congress

Tags :

.