ಕಾಂಗ್ರೆಸ್ ಸರ್ಕಾರದಲ್ಲೂ 40 ಪರ್ಸೆಂಟ್ ಕಮಿಷನ್ – ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ.
ಬೆಂಗಳೂರು,ಫೆಬ್ರವರಿ,8,2024(www.justkannada.in): ಕಳೆದ ಬಿಜೆಪಿ ಅವಧಿಯಲ್ಲಿ ಕೇಳಿ ಬಂದಿದ್ದ 40 ಪರ್ಸೆಂಟ್ ಕಮಿಷನ್ ಆರೋಪ ಇದೀಗ ಕಾಂಗ್ರೆಸ್ ಸರ್ಕಾರದ ವಿರುದ್ದವೂ ಕೇಳಿ ಬಂದಿದೆ. ಈ ಆರೋಪ ಮಾಡಿರುವುದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ.
ಹೌದು ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕೆಂಪಣ್ಣ ರಾಜ್ಯ ಸರ್ಕಾರದ ವಿರುದ್ದ ಮತ್ತೆ ಕಮಿಷನ್ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲೂ 40 ಪರ್ಸೆಂಟ್ ಕಮಿಷನ್ ಮುಂದುವರೆದಿದೆ. ಮೊದಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಸಕರು ನೇರವಾಗಿ ಹಣ ಕೇಳುತ್ತಿದ್ರು. ಈಗ ಅಧಿಕಾರಿಗಳೇ ನೇರವಾಗಿ ಹಣ ಕೇಳುತ್ತಿದ್ದಾರೆ. ಪ್ರತಿ ಟೆಂಡರ್ ನಲ್ಲೂ ಹಣ ಕೇಳುತ್ತಿದ್ದಾರೆ. ಸದ್ಯದಲ್ಲೆ ಅಧಿಕಾರಿಗಳು ಎಂಜಿನಿಯರ್ ಗಳ ದಾಖಲೆ ಬಿಡುಗಡೆ ಮಾಡುವೆ ಎಂದರು.
ವಿವಿಧ ಇಲಾಖೆಯಲ್ಲಿ ಅನವಶ್ಯಕ ಪ್ಯಾಕೇಜ್ ಟೆಂಡರ್ ಗಳಾಗಿವೆ. ಕೂಡಲೇ ಪ್ಯಾಕೇಜ್ ಟೆಂಡರ್ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಹಲವು ಬಾರಿ ಸಿಎಂ ಅವರನ್ನ ಭೇಟಿ ಮಾಡಿದ್ದೇವೆ ಟೆಂಡರ್ ರದ್ದುಗೊಳಿಸಲು ಮನವಿ ಮಾಡಿದ್ದೇವೆ. ಹತ್ತಾರು ಪತ್ರ ಬರೆದು ಸಿಎಂ ಗೆ ಮನವಿ ಮಾಡಿದ್ದೇವೆ ಎಂದಿದ್ದಾರೆ.
Key words: 40 percent -commission - Congress -government - Kempanna