HomeBreaking NewsLatest NewsPoliticsSportsCrimeCinema

68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ.

10:14 AM Nov 01, 2023 IST | prashanth

ಬೆಂಗಳೂರು,ನವೆಂಬರ್,1,2023(www.justkannada.in): ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಆಚರಣೆ ನಡೆಯುತ್ತಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ,ಕೃಷಿ ಸಚಿವ ಎನ್​.ಚಲುವರಾಯಸ್ವಾಮಿ, ಶಾಸಕ ರಿಜ್ವಾನ್ ಅರ್ಷದ್, ಆರ್​. ವಿ.ದೇಶಪಾಂಡೆ​ ಸೇರಿದಂತೆ ಹಲವರು ಉಪಸ್ಥಿತರಿದ್ದರು.  ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯುತ್ತಿದ್ದು,  ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.

Key words: 68th Kannada Rajyotsava -CM Siddaramaiah -hoisting - flag

 

Tags :
68th Kannada Rajyotsava -CM Siddaramaiah -hoisting - flag
Next Article