ಕೇಂದ್ರ ಸರ್ಕಾರ ಸಂವಿಧಾನದ ಆಶಯಗಳನ್ನ ನಿರ್ಲಕ್ಷಿಸಿದೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು,ಆಗಸ್ಟ್,15,2024 (www.justkannada.in): ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಕೇಂದ್ರ ಸರ್ಕಾರ ಸಂವಿಧಾನದ ಆಶಯಗಳನ್ನ ನಿರ್ಲಕ್ಷಿಸಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಹಿನ್ನೆಲೆಯಲ್ಲಿ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ ತಮ್ಮ ಸರ್ಕಾರದ ಸಾಧನೆಗಳು, ಯೋಜನೆಗಳ ಬಗ್ಗೆ ವಿವರಿಸಿದರು.
ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ರಾಜ್ಯದ ಜವಾಬ್ದಾರಿಯಾದರೆ, ಇವುಗಳಿಗೆ ಪೂರಕ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆಗಾರಿಕೆ. ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಈ ಆಶಯದಿಂದ ದೂರ ಸರಿಯುತ್ತಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯವಾಗುತ್ತಿದೆ. ರಾಜ್ಯಕ್ಕೆ ದೊರೆಯಬೇಕಾದ ಹಣಕಾಸಿನ ಪಾಲು ನೀಡಲು ಕೇಂದ್ರ ಮೀನಮೇಷ ಎಣಿಸುತ್ತಿದೆ. ಹಣ ಪಡೆಯಲು ಕೋರ್ಟ್ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಇದು ಜನಹಿತಕ್ಕೆ ಒಳ್ಳೆಯದಲ್ಲ. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.
Key words: 78th Independence Day, CM, Siddaramaiah, Bangalore