For the best experience, open
https://m.justkannada.in
on your mobile browser.

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು.

11:01 AM Apr 13, 2024 IST | prashanth
ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ  ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ, ಏಪ್ರಿಲ್​ 13,2024 (www.justkannada.in): ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ.

ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40), ಮೇಘರಾಜ ರಜಪೂತ (12) ಮೃತಪಟ್ಟವರು.  ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರಿನಲ್ಲಿ ನಾಲ್ವರು ವಿಜಯಪುರದಿಂದ ಜಮಖಂಡಿಯಲ್ಲಿರುವ ದೇವಸ್ಥಾನಕ್ಕೆ ಹೊರಟಿದ್ದರು.  ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಜಮಖಂಡಿಯಿಂದ ವಿಜಯಪುರಕ್ಕೆ ಬರುತ್ತಿತ್ತು. ಅರ್ಜುಣಗಿ ಗ್ರಾಮದ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ ಸ್ಥಳಕ್ಕೆ ವಿಜಯಪುರ ಎಸ್​ಪಿ ಋಷಿಕೇಶ ಸೋನೆವಣೆ ಭೇಟಿ ನೀಡಿದ್ದು, ಈ ಕುರಿತು ಬಬಲೇಶ್ವರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: accident, car, lorry, died

Tags :

.