HomeBreaking NewsLatest NewsPoliticsSportsCrimeCinema

ಕಾರಿಗೆ ಲಾರಿಗೆ ಡಿಕ್ಕಿ: ಭೀಕರ ಅಪಘಾತಕ್ಕೆ ನಾಲ್ವರು ಬಲಿ.

01:02 PM Jun 15, 2024 IST | prashanth

ಚಿತ್ರದುರ್ಗ, ಜೂನ್​ 15, 2024 (www.justkannada.in): ಕಾರಿಗೆ ಲಾರಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ನಡೆದಿದೆ.

ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟರೇ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾರೆ.  ಬೆಂಗಳೂರಿನ ತಣಸಂದ್ರ ಮೂಲದವರಾದ  ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ನೋಹನ್ (2), ವಿಜಯರೆಡ್ಡಿ ಮೃತಪಟ್ಟವರು.

ಮೃತರು ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರಿಗೆ ಲಾರಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಕಾರಿಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು,  ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಮತ್ತೋರ್ವ ಮೃತಪಟ್ಟಿದ್ದಾರೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

Key words: accident, Four, people, die

Tags :
accident-Four people-die
Next Article