ಸರ್ಕಾರಿ ಬಸ್ ಮತ್ತು ಓಮ್ನಿ ನಡುವೆ ಭೀಕರ ಅಪಘಾತ: ಮೂವರು ಸಾವು.
03:00 PM Apr 11, 2024 IST
|
prashanth
ದಾವಣಗೆರೆ,ಏಪ್ರಿಲ್,11,2024 (www.justkannada.in): ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟಿ ಗ್ರಾಮದ ಬಳಿ ನಡೆದಿದೆ.
ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹರಮಘಟ್ಟ ಗ್ರಾಮದ ನಂಜುಂಡಪ್ಪ (83), ಸೂರಗೊಂಡನಕೊಪ್ಪ ಗ್ರಾಮದ ದೇವರಾಜ್ (27), ರಾಕೇಶ್ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಶಿಕಾರಿಪುರದ ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಮತ್ತು ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಕಾರಿನ ನಡುವೆ ಅಪಘಾತವಾಗಿದೆ ಎನ್ನಲಾಗಿದೆ.
ಅಪಘಾತದಲ್ಲಿ 6ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
Key words: accident, government bus, Omni
Next Article