HomeBreaking NewsLatest NewsPoliticsSportsCrimeCinema

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ:13 ಮಂದಿ ಸಾವು

12:53 PM Jun 28, 2024 IST | prashanth

ಹಾವೇರಿ,ಜೂನ್,28,2024(www.justkannada.in):  ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಭಧ್ರಾವತಿ ಮೂಲದ 13 ಮಂದಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಪರಶುರಾಮ್ ​​(45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ ಬಾಯಿ (65), ಪುಣ್ಯ (50), ಮಂಜುಳಾಬಾಯಿ, ಚಾಲಕ ಆದರ್ಶ್ (23), ಮಾನಸ (24), ರೂಪಾ (40), ಮಂಜುಳಾ (50) ಮೃತಪಟ್ಟವರು.

ಮೃತಪಟ್ಟವರೆಲ್ಲರೂ ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ಮೃತ ನಾಗೇಶ್​ ಎಮ್ಮೆಹಟ್ಟಿ ಗ್ರಾಮದಲ್ಲಿ ಕೃಷಿಕರಾಗಿದ್ದಾರೆ. ನಾಗೇಶ್​ ಪತ್ನಿ ವಿಶಾಲಾಕ್ಷಿ ಆಶಾ ಕಾರ್ಯಕರ್ತೆಯಾಗಿದ್ದರು. ​ ಮತ್ತು ವಿಶಾಲಕ್ಷಿ ದಂಪತಿ ಪುತ್ರ ಆದರ್ಶ್ ಹೊಸ ಟಿಟಿ ವಾಹನ ಖರೀದಿಸಿದ್ದರು. ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ಹೋಗಿದ್ದರು  ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ ಹೋಗಿದ್ದಾರೆ. ಅಲ್ಲಿಂದ ಬೆಳಗಾವಿ ಜಿಲ್ಲೆ ಸವದತ್ತಿಗೆ ಆಗಮಿಸಿ, ಇಲ್ಲಿಯ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುವಾ ಅಪಘಾತ ಸಂಭವಿಸಿದೆ.

accident, TT vehicle, collides, 13 people, death

Tags :
13 peopleaccidentcollidesdeathTT vehicle
Next Article