ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್.
01:57 PM May 27, 2024 IST
|
prashanth
ದಾವಣಗೆರೆ,ಮೇ,27,2024 (www.justkannada.in): ದಾವಣಗೆರೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಆದಿಲ್ ಸಾವು ಬಳಿಕ ಪೊಲೀಸ್ ಠಾಣೆ ಮೇಲೆ ಜನರಿಂದ ದಾಳಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನ ಅಮಾನತು ಮಾಡಿ ಆದೇಶಿಸಲಾಗಿದೆ.
ಡಿವೈಎಸ್ಪಿ ಪ್ರಶಾಂತ್ ಮುನ್ನೊಳ್ಳಿ , ಇನ್ ಸ್ಪೆಕ್ಟರ್ ಬಿ ನಿರಂಜನ್ , ಎಸ್ ಐ ಅಕ್ತರ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಪೂರ್ವವಲಯ ಐಜಿಪಿ ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.
ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಆದಿಲ್ ಎಂಬ ಆರೋಪಿಯನ್ನ ಪೊಲೀಸರು ಠಾಣೆಗೆ ಕರೆತಂದಿದ್ದರು. ಈ ವೇಳೆ ಪೊಲೀಸ್ ಠಾಣೆಯಲ್ಲೇ ಆದಿಲ್ ಕುಸಿದು ಬಿದ್ದು ಮೃತಪಟ್ಟಿದ್ದರು. ಮೃತ ಆದಿಲ್ ನ ಪೋಷಕರು ಇದು ಲಾಕಪ್ ಡೆತ್ ಎಂದು ಆರೋಪಿಸಿದ್ದರು. ಅಲ್ಲದೆ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಕಲ್ಲು ತೂರಾಟ ನಡೆಸಲಾಗಿತ್ತು. ಇದರಿಂದ ಪೊಲೀಸ್ ವಾಹನಗಳು ಜಖಂ ಆಗಿದ್ದವು.
Key words: Accused, death, police station, suspended
Next Article