ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಕೇಸ್ : ಘಟನೆ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್.
ಬೆಂಗಳೂರು,ಮೇ,25,2024 (www.justkannada.in): ದಾವಣಗೆರೆ ಜಿಲ್ಲೆ ಚೆನ್ನಗಿರಿಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆದಿಲ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಡಾ.ಜಿ.ಪರಮೇಶ್ವರ್, ದೂರಿನ ಬೆನ್ನಲ್ಲೆ ಆದಿಲ್ ನನ್ನ ಪೊಲೀಸರು ಸ್ಟೇಷನ್ ಗೆ ಕರೆತಂದಿದ್ದಾರೆ .ಕರೆತಂದ 7 ನಿಮಿಷದಲ್ಲೇ ಆರೋಗ್ಯದಲ್ಲಿ ಏರು ಪೇರಾಗಿ ಸಾವನ್ನಪ್ಪಿದ್ದಾನೆ. ಆರೋಗ್ಯದಲ್ಲಿ ಏರುಪೇರಾಗಿ ಆದಿಲ್ ಸಾವನ್ನಪ್ಪಿದ್ದಾನೆ . ಪೋಸ್ಟ್ ಮಾಟರ್ಮ್ ನಲ್ಲಿ ಸಾವಿಗೆ ಕಾರಣ ತಿಳಿದು ಬರುತ್ತದೆ ಎಂದರು.
ಆದಿಲ್ ಸಾವು ಬೆನ್ನಲ್ಲೆ ಲಾಕಪ್ ಡೆತ್ ಎಂದು ಆರೋಪಿಸಿ ರೊಚ್ಚಿಗೆದ್ದ ಜನರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕಲ್ಲು ತೂರಾಟ ನಡೆದಿದ್ದು, 10ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂ ಆಗಿವೆ. ಕಿಟಕಿಗಳು ಪುಡಿಪುಡಿಯಾಗಿದ್ದು ಚೆನ್ನಗಿರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚೆನ್ನಗಿರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
Key words: Accused, police custody, death, case, Dr. G. Parameshwar