For the best experience, open
https://m.justkannada.in
on your mobile browser.

ರಾಜ್ಯದಲ್ಲಿ ಭ್ರಷ್ಟಾಚಾರ: ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಸಾಧನೆ ಶೂನ್ಯ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

01:45 PM May 24, 2024 IST | prashanth
ರಾಜ್ಯದಲ್ಲಿ ಭ್ರಷ್ಟಾಚಾರ  ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಸಾಧನೆ ಶೂನ್ಯ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬಳ್ಳಾರಿ,ಮೇ,24,2024 (www.justkannada.in): ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು,  ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಸಾಧನೆ ಶೂನ್ಯ. ದೇಶದ ಅನೇಕ ಭಾಗಗಳಲ್ಲಿ ನಡೆಯುತ್ತಿರುವ ಚುನಾವಣೆಗಳಿಗೆ ಕಾಂಗ್ರೆಸ್ ಸರ್ಕಾರ ಎಟಿಎಂ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಕಾಂಗ್ರೆಸ್ ಸರ್ಕಾರ ದೇಶದ ಚುನಾವಣೆಗೆ ಎಟಿಎಂ ಆಗಿದೆ. ರಾಜ್ಯದಲ್ಲಿ ಶಿಕ್ಷಕರಿಗೆ ನೌಕರರಿಗೆ ಸಂಬಳ ಸಿಗ್ತಿಲ್ಲ.  ಕಾನೂನು ಸುವ್ಯವಸ್ಥೆ ಕುಸಿದಿದೆ. ಭ್ರಷ್ಟಾಚಾರ ತಾಂಢವಾಡುತ್ತಿದೆ.  ಇದು ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ ಎಂದು ಗುಡುಗಿದರು.

ಜನರ ಇಚ್ಛೆಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರೈಸಬೇಕು. ಆದರೆ, ಅವರ ಆಂತರಿಕ ಬೇಗುದಿಯಿಂದ ಸರ್ಕಾರ ಬಿದ್ದರೆ ಅದಕ್ಕೆ ನಾವು ಹೊಣೆಯಲ್ಲ.ಆಂತರಿಕ ಬೇಗುದಿ, ಅಸಮಾಧಾನದ ಕಾರಣಕ್ಕೆ ಸರ್ಕಾರ ಬಲಿಯಾದರೆ ಏನು ಮಾಡಲಾಗದು. ಅದಕ್ಕೆ ನಾವು ಹೊಣೆಯಲ್ಲ ಎಂದು ತಿಳಿಸಿದರು.

ತುಷ್ಠೀಕರಣ ನೆಪದಲ್ಲಿ ರಾಮೇಶ್ವರ ಬಾಂಬ್ ಸ್ಫೋಟವನ್ನು ಸಿಲಿಂಡರ್ ಸ್ಫೋಟ ಅಂದರು. ಬಯಲಾದ ಮೇಲೆ ಮಾಮೂಲು ಹೇಳಿಕೆ ನೀಡಿದರು. ಇಂಥ ವಿಷಯಗಳ ವಿರುದ್ಧ ಧ್ವನಿ ಎತ್ತಿದವರ ಮೇಲೆ ಕೇಸ್ ಹಾಕಿ ಬೆದರಿಕೆ ಒಡ್ಡಲಾಗುತ್ತಿದೆ ಎಂದರು.

Key words: Corruption, achievement, Congress, government, Prahlad Joshi.

Tags :

.