For the best experience, open
https://m.justkannada.in
on your mobile browser.

ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ, ನೈರ್ಮಲ್ಯದ ಕೊರತೆ: ಮಾಲೀಕರಿಗೆ ಕಾನೂನು ಕ್ರಮದ ಎಚ್ಚರಿಕೆ.

10:36 AM Jun 19, 2024 IST | prashanth
ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ  ನೈರ್ಮಲ್ಯದ ಕೊರತೆ  ಮಾಲೀಕರಿಗೆ ಕಾನೂನು ಕ್ರಮದ ಎಚ್ಚರಿಕೆ

ಬೆಂಗಳೂರು,ಜೂನ್,19,2024 (www.justkannada.in):  ನಗರದ ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರಿಗೆ ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.

ಈ ಕುರಿತು ಸಾರ್ವಜನಿಕರು ದೂರುಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳನ್ನ ಪಾಲಿಸದ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಿಗೆ  ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಈ ಕುರಿತು ಸಿಎಂ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದ್ದು, ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿದೆ.

ಅಂತೆಯೇ ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿದೆ. ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

Key words: Action, CM, office, Food, Safety, Quality

Tags :

.