ನಟ ದರ್ಶನ್ ಗೆ ಜೈಲೇಗತಿ: ಮತ್ತೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ
02:19 PM Sep 09, 2024 IST | prashanth
ಬೆಂಗಳೂರು,ಸೆಪ್ಟಂಬರ್,9,2024 (www.justkannada.in): ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12 ರವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಸಿಎಂ ನ್ಯಾಯಾಲಯವು ಆದೇಶಿಸಿದೆ. ಈ ಮೂಲಕ ನಟ ದರ್ಶನ್ ಗೆ ಜೈಲೇಗತಿಯಾಗಿದೆ.
ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಅಂತ್ಯವಾಗಿತ್ತು. ಇಂದು ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ACMM ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಇದೀಗ ಕೋರ್ಟ್ ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಪ್ರಕರಣ ಸಂಬಂಧ ಈಗಾಗಲೇ ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
Key words: Actor, Darshan, Judicial custody, extended