HomeBreaking NewsLatest NewsPoliticsSportsCrimeCinema

ನಟ ಯಶ್ ಕಟೌಟ್ ಕಟ್ಟುವಾಗ ಕರೆಂಟ್ ಶಾಕ್ : ಮೂವರು ಯುವಕರು ಸಾವು.

10:27 AM Jan 08, 2024 IST | prashanth

ಗದಗ, ಜನವರಿ,8,2024(www.justkannada.in): ನಟ ರಾಕಿಂಗ್ ಸ್ಟಾರ್ ಯಶ್  ಹುಟ್ಟುಹಬ್ಬಕ್ಕೆ ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಗುಲಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.

ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತಪಟ್ಟವರು. ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ನಟ ಯಶ್​ ಅವರ ಹುಟ್ಟುಹಬ್ಬ ಹಿನ್ನಲೆ ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವ ವೇಳೆ ವಿದ್ಯುತ್ ತಗುಲಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದಾರೆ.  ಸೂರಣಗಿ ಗ್ರಾಮದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮೂವರ ಅಂತ್ಯಕ್ರಿಯೆಗೆ ಸಿದ್ದತೆ ನಡೆಸಲಾಗುತ್ತಿದೆ.

Key words: Actor- Yash –birtday- current shock – cutout- Three - died

 

Tags :
Actor- Yash –birtday- current shock – cutout- Three - died
Next Article