ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.
ಬೆಂಗಳೂರು,ಮೇ,28,2024 (www.justkannada.in): ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ಆರೋಪ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಕೇಸ್ ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ನಿನ್ನೆ ವಿಚಾರಣೆಯನ್ನ ಇಂದಿಗೆ ಮುಂದೂಡಿಕೆ ಮಾಡಲಾಗಿತ್ತು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಧೀಶ ಸಂತೋಷ್ ಗಜಾನನ ಭಟ್ ಅವರು ವಿಚಾರಣೆಯನ್ನು ನಾಳೆಗೆ ಮುಂದೂಡಿದರು.
ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಭವಾನಿ ರೇವಣ್ಣರನ್ನು ಈವರೆಗೂ ಆರೋಪಿಯನ್ನಾಗಿ ಮಾಡಿಲ್ಲ. ಎಫ್ ಐಆರ್ ನಲ್ಲಿ ಸೇರಿಸದೆ ಬಂಧಿಸಬಾರದು ಎಂದೇನಿಲ್ಲ. ಆದರೆ ಮಧ್ಯಂತರ ಜಾಮೀನು ಪರಿಗಣಿಸಲು ಏನಾದರೂ ದಾಖಲೆ ಬೇಕು. ಎಸ್‌ಐಟಿ ಮೊದಲು ಆಕ್ಷೇಪಣೆಯನ್ನು ಸಲ್ಲಿಸಲಿ ಎಂದು ತಿಳಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.
Key words: Adjournment, Bhavani Revanna, bail application.