HomeBreaking NewsLatest NewsPoliticsSportsCrimeCinema

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣ-ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ.

05:49 PM Feb 07, 2024 IST | prashanth

ಬೆಂಗಳೂರು,ಫೆಬ್ರವರಿ,7,2024(www.justkannada.in): ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಇಂದು ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ನಡೆಸಿದ ಪ್ರತಿಭಟನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ, ದೆಹಲಿಯಲ್ಲಿ ಶೋಕಿ ಮಾಡಲು ಪ್ರಚಾರ ಪಡೆಯಲು ಹೋಗಿದ್ದಾರೆ. ರಾಜ್ಯದಲ್ಲಿ ಒಂದು ರೀತಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಬರಗಾಲ ಆವರಿಸಿದರೂ  ಅದಕ್ಕೆ ಪೂರ್ವ ತಯಾರಿಯೂ ಇಲ್ಲ. ಭಿಕ್ಷೆ ಕೊಟ್ಟಂತೆ 2 ಸಾವಿರ ಕೊಡುವ ಘೋಷಣೆ ಮಾಡಿದ್ದು, ಅದನ್ನೂ ಸರಿಯಾಗಿ ಕೊಟ್ಟಿಲ್ಲ ಎಂದು ಹರಿಹಾಯ್ದರು.

ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೇ  ಅವರ ಮೇಲೆ ಲಾಠಿಪ್ರಹಾರ ಮಾಡುತ್ತಾರೆ. ಅಧಿಕಾರದ ಅಮಲಿನಲ್ಲಿ ಇರುವ ಈ ರಾಜ್ಯ ಸರಕಾರವು ದರ್ಪದಿಂದ ನಡೆದುಕೊಳ್ಳುತ್ತಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ ಮುಖಂಡರ ಮೇಲೆ, ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಖಂಡನೀಯ ಎಂದು ವಾಗ್ದಾಳಿ ನಡೆಸಿದರು.

Key words: undeclared - emergency - created - state-BY Vijayendra.

 

Tags :
After -Modi -became –PM- 3rd time-Congress -doubled down - Former CM -Basavaraj Bommaiundeclared - emergency - created - state-BY Vijayendra.
Next Article