For the best experience, open
https://m.justkannada.in
on your mobile browser.

ಮೋದಿ 3ನೇ ಬಾರಿ ಪ್ರಧಾನಿಯಾದ ಬೆನ್ನಲ್ಲೆ ಕಾಂಗ್ರೆಸ್ ಇಬ್ಬಾಗ- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

05:16 PM Feb 07, 2024 IST | prashanth
ಮೋದಿ 3ನೇ ಬಾರಿ ಪ್ರಧಾನಿಯಾದ ಬೆನ್ನಲ್ಲೆ ಕಾಂಗ್ರೆಸ್ ಇಬ್ಬಾಗ  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು,ಫೆಬ್ರವರಿ,7,2024(www.justkannada.in):  ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ  ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದ ಮೇಲೆ ತಮ್ಮ ತತ್ವ ಸಿದ್ದಾಂತ ಗಾಳಿಗೆ ತೂರಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಬರಗಾಲ ಬಂದರೂ ಬರ ಪರಿಹಾರ ಮಾತ್ರ ಇನ್ನೂ ನೀಡಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ‌. ಇವರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.

ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ.  ಪ್ರಧಾನಿ ಮೋದಿ ಅವರ ಅವಧಿಯಲ್ಲಿ ಅನುದಾನ ಎಷ್ಟು ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಲಿ, ಯುಪಿಎ ಅವಧಿಯಲ್ಲಿ 82 ಸಾವಿರ ಕೋಟಿ ಮಾತ್ರ ಬಂದಿದೆ. ಮೋದಿ ಅವರ ಅವಧಿಯಲ್ಲಿ  2.82 ಲಕ್ಷ ಕೋಟಿ ಬಂದಿದೆ. ರಾಜ್ಯಕ್ಕೆ ಅನ್ಯಾಯ ಮಾಡಿದವರು ಮನಮೋಹನ್ ಸಿಂಗ್ ಮತ್ತು ಸಿದ್ದರಾಮಯ್ಯ ಎಂದು  ಬೊಮ್ಮಾಯಿ ಕಿಡಿಕಾರಿದರು.

Key words: After -Modi -became –PM- 3rd time-Congress -doubled down - Former CM -Basavaraj Bommai

Tags :

.