HomeBreaking NewsLatest NewsPoliticsSportsCrimeCinema

ರಾಜ್ಯಸಭೆ ಚುನಾವಣೆಯಲ್ಲಿ ಹಣದ ಆಮಿಷ ಆರೋಪ: ಕಾಂಗ್ರೆಸ್ ನಿಯೋಗ ದೂರು.

04:53 PM Feb 20, 2024 IST | prashanth

ಬೆಂಗಳೂರು,ಫೆಬ್ರವರಿ,20,2024(www.justkannada.in): ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಜೆಡಿಎಸ್-ಬಿಜೆಪಿ ಹಣದ ಆಮಿಷ ಒಡ್ಡುತ್ತಿದೆ ಎಂದು ಆರೋಪಿಸಿ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರಿಗೆ ಕಾಂಗ್ರೆಸ್ ನಿಯೋಗ ದೂರು ನೀಡಿದೆ.

ಶಾಸಕ ರವಿ ಗಣಿಗ ರವಿ, ಕೋನರೆಡ್ಡಿ ನೇತೃತ್ವದ ನಿಯೋಗ ದೂರನ್ನು ನೀಡಿದ್ದು ಸೂಕ್ತ ಕ್ರಮಕ್ಕೆ ಆಗ್ರಹಿಸಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಅಡ್ಡಮತ ಚಲಾಯಿಸಲು ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಹಣದ ಆಮಿಷವೊಡ್ಡಿ, ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಿಯೋಗ  ದೂರು ನೀಡಿದೆ.

ಹಣದ ಆಮಿಷವೊಡ್ಡಿ, ಬೆದರಿಕೆ ಹಾಕಿದ ಬಗ್ಗೆ ಸಾಕ್ಷಿಗಳಿದ್ದು, ಪ್ರಕರಣ ದಾಖಲಿಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ತಮ್ಮ ಪಕ್ಷದ ಸದಸ್ಯರು, ಸ್ವತಂತ್ರ ಅಭ್ಯರ್ಥಿಗಳಿಗೆ ರಕ್ಷಣೆ ನೀಡುವಂತೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.

Key words: Allegation –money- luring - Rajya Sabha -elections: Congress delegation -complains.

Tags :
Allegation –money- luring - Rajya Sabha -elections: Congress delegation -complains.
Next Article