HomeBreaking NewsLatest NewsPoliticsSportsCrimeCinema

ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಫಿಕ್ಸ್ : ಬಿಜೆಪಿ, ಜೆಡಿಎಸ್ ಗೆ ಎಷ್ಟು ಸ್ಥಾನ..? ಮಾಹಿತಿ ನೀಡಿದ  ಮಾಜಿ ಸಿಎಂ ಬಿಎಸ್ ವೈ

11:33 AM May 11, 2024 IST | prashanth
featuredImage featuredImage

ಮೈಸೂರು,ಮೇ,11,2024 (www.justkannada.in): ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿರುವ ಬಿಜೆಪಿ ಮತ್ತು ಜೆಡಿಎಸ್ ಇದೀಗ ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿಮಾಡಿಕೊಂಡು ಸ್ಪರ್ಧಿಸಲು ಮುಂದಾಗಿವೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ಮಾಹಿತಿ ಹಂಚಿಕೊಂಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿಧಾನ ಪರಿಷತ್ 6 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲಿದ್ದು, ಬಿಜೆಪಿ 4 ಹಾಗೂ ಜೆಡಿಎಸ್ 2 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಜೆಡಿಎಸ್ ಜೊತೆಗಿನ ಮೈತ್ರಿಗೆ ಯಾವುದೇ ಭಂಗವಿಲ್ಲ ಎಂದಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಳೂ ಮೈತ್ರಿ ಇರಲಿದೆ. ಆದರೆ ಎಲ್ಲಿ ಸ್ಥಾನ ಬಿಟ್ಟುಕೊಡಬೇಕು ಎಂದು ತೀರ್ಮಾನವಾಗಿಲ್ಲ ಸಂಜೆ ಜೆಪಿ ನಡ್ಡಾ ಬಿಡುಗಡೆ ಮಾಡಲಿದ್ದಾರೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: Alliance, fix, MLC election,  BSY

Tags :
Alliance- fix – MLCB.S.YeddyurappaelectionsFormer CM