For the best experience, open
https://m.justkannada.in
on your mobile browser.

ಲೋಕಸಭೆ ಚುನಾವಣೆ  ಬಳಿಕ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ-ಡಿಸಿಎಂ ಡಿಕೆ ಶಿವಕುಮಾರ್.

04:56 PM May 13, 2024 IST | prashanth
ಲೋಕಸಭೆ ಚುನಾವಣೆ  ಬಳಿಕ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮೇ,13,2024 (www.justkannada.in): ಮಹಾರಾಷ್ಟ್ರದಂತೆಯೇ ಕರ್ನಾಟಕದಲ್ಲೂ ಅಪರೇಷನ್ ಕಮಲ ನಡೆಯಲಿದೆ ಎನ್ನುವ ಮೂಲಕ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂ ಏಕನಾಥ ಸಿಂಧೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಲೋಕಸಭಾ ಚುನಾವಣೆ ಆದ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ. ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ ಎಂದು ಟಾಂಗ್ ಕೊಟ್ಟಿದ್ದಾರೆ.

ಕರ್ನಾಟಕದಲ್ಲಿ ಶಿಂಧೆ ತರದವರು ಇದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್, "ಅವರಲ್ಲಿ ಆ ತರದವರು ಇರಬಹುದು. ನಮ್ಮಲ್ಲಿ ಇಲ್ಲ. ನಮಗೆ ಯಾರ ಭಯವೂ ಇಲ್ಲ. ಅವರ ಸರ್ಕಾರ ಬೀಳುತ್ತದೆ, ಪಕ್ಷ ಬಿಟ್ಟು ಬಂದವರು ಮರಳಿ ಹೋಗುತ್ತಾರೆ ಎನ್ನುವ ಭಯದಿಂದ ಹೀಗೆ ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Key words: alliance, government, Maharashtra, DK Shivakumar

Tags :

.