HomeBreaking NewsLatest NewsPoliticsSportsCrimeCinema

ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಗೂ ಕನ್ನ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಸಸ್ಪೆಂಡ್

11:56 AM Aug 10, 2024 IST | prashanth

ಕೊಪ್ಪಳ,ಆಗಸ್ಟ್,10,2024 (www.justkannada.in):  ಅಂಗನವಾಡಿ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಅಮಾನತುಗೊಳಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಅಂಗನವಾಡಿ  ಕಾರ್ಯಕರ್ತೆ ಲಕ್ಷ್ಮೀ, ಸಹಾಯಕಿ ಶೈನಜಾಬೇಗಂ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಶಾಲೆಯ ಕಾರ್ಯಕರ್ತೆ, ಸಿಬ್ಬಂದಿಯನ್ನು ಅಮಾನತು ಮಾಡಿ ಮಹಿಳಾ‌ & ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

ಮೊದಲು ಮಕ್ಕಳ ತಟ್ಟೆಗೆ ಹಾಕಿ ಅದನ್ನ ವಿಡಿಯೋ ಮಾಡಿ ನಂತರ ಮೊಟ್ಟೆಯನ್ನು  ಕಸಿದುಕೊಳ್ಳುವ ಕೆಲಸವನ್ನ ಅಂಗನವಾಡಿ ಶಾಲೆಯ ಕಾರ್ಯಕರ್ತೆ, ಸಿಬ್ಬಂದಿ ಮಾಡುತ್ತಿದ್ದರು.

ಅಂಗನವಾಡಿ ಕಾರ್ಯಕರ್ತೆಯ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಅಂಗನವಾಡಿ ಕಾರ್ಯಕರ್ತೆ ನಡೆಗೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.  ಈ ಹಿನ್ನೆಲೆಯಲ್ಲಿ ಕಾರ್ಯಕರ್ತೆ ಹಾಗೂ ಸಿಬ್ಬಂದಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ.

Key words: Anganwadi worker, helper, suspended, eggs

Tags :
Anganwadi workereggshelpersuspended..
Next Article