ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ; ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ
ತಿರುಪತಿ,ಸೆಪ್ಟಂಬರ್,19,2024 (www.justkannada.in): ತಿರುಪತಿ ತಿಮ್ಮಪ್ಪನ ಭಕ್ತರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಶಾಕಿಂಗ್ ವಿಚಾರವನ್ನ ತಿಳಿಸಿದ್ದು, ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು. ಕಳೆದ 5 ವರ್ಷಗಳಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿದ್ದರು, ದೇವಸ್ಥಾನದ ಪಾವಿತ್ರ್ಯತೆ ಕಾಪಾಡಲು ಪ್ರಯತ್ನಿಸುತ್ತಿದ್ದೇವೆ, ದೇವಾಲಯದ ಸಂಪ್ರದಾಯಗಳನ್ನು ಮರುಸ್ಥಾಪಿಸುವುದರ ಜೊತೆಗೆ, ದೇವಾಲಯವನ್ನು ಉಳಿಸಿಕೊಳ್ಳಲು ಸರ್ಕಾರವು ಪ್ರಯತ್ನಿಸುತ್ತಿದೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
Key words: animal fat, tirupati Laddu, Andhra CM, Chandrababu Naidu