For the best experience, open
https://m.justkannada.in
on your mobile browser.

ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ.

04:39 PM Feb 21, 2024 IST | prashanth
ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ,ಫೆಬ್ರವರಿ,21,2024(www.justkannada.in):  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಒಟ್ಟು 30 ಬೆರಳಚ್ಚುಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪಿ.ಯ.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಕನ್ನಡ ಮತ್ತು ಇಂಗ್ಲಿಷ್ ಪ್ರೌಢ ದರ್ಜೆ ಬೆರಳಚ್ಚು ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನಾಂಕವಾಗಿರುತ್ತದೆ. ಅಧಿಸೂಚನೆಗಾಗಿ ಮತ್ತು ಇತರೆ ಸೂಚನೆಗಳಿಗಾಗಿ ಹಾಗೂ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ನ್ಯಾಯಾಲಯದ ವೆಬ್-ಸೈಟ್ https://bengalururural.dcourts.gov.in/online-recruitment/ ಗೆ ಭೇಟಿ ನೀಡಬಹುದಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುಖ್ಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Application- Invitation - Posts -Typist –bangalore rural- District Court.

Tags :

.