For the best experience, open
https://m.justkannada.in
on your mobile browser.

ಖಾಲಿ ಇರುವ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಕ್ರಮ: ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಘೋಷಣೆಯಾಗಿದ್ದೇನು..?

12:06 PM Feb 16, 2024 IST | prashanth
ಖಾಲಿ ಇರುವ ಶಿಕ್ಷಕರ  ಉಪನ್ಯಾಸಕರ ನೇಮಕಕ್ಕೆ ಕ್ರಮ  ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಘೋಷಣೆಯಾಗಿದ್ದೇನು

ಬೆಂಗಳೂರು,ಫೆಬ್ರವರಿ,16,2024(www.justkannada.in): ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಕ, ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಅಸ್ಮಿತೆ, ಸಂಸ್ಕೃತಿಗೆ ಅನುಗುಣವಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ 20 ಸಾವಿರ ಸೈನ್ಸ್​ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮೀಸಲು ಇಡಲಾಗುವುದು. ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡಲಾಗುವುದು. ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್​ ಹಾಗೂ ಇಂಟರ್​ ನೆಟ್​ ಸೌಲಭ್ಯಕ್ಕೆ 50 ಕೋಟಿ ಪ್ಯಾಕೇಜ್ ನೀಡಲಾಗುವುದು. 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು  ತಿಳಿಸಿದರು.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಉಚಿತ ವಿದ್ಯುತ್ ,  ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ನಿರಂತರ ನೀರಿನ ಸೌಲಭ್ಯ,  ಉಚಿತ ವಿದ್ಯುತ್ ಗೆ 25 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ತಿಳಿಸಿದರು.

ಇನ್ನು ಮಹಿಳಾ ಪಾಲಿಟೆಕ್ನಿಕ್​​ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು ಇಡಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ, ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು  ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: appointment –teachers –lecturers -announcement - education sector - budget

Tags :

.