ಜಮ್ಮು ಕಾಶ್ಮೀರ, ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಫಿಕ್ಸ್
ನವದೆಹಲಿ, ಆಗಸ್ಟ್,16,2024 (www.justkannada.in): ಜಮ್ಮು ಕಾಶ್ಮೀರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನ ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.
ಜಮ್ಮುಕಾಶ್ಮೀರದಲ್ಲಿ 90 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ . ಈ ಕುರಿತು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ ಮಾಹಿತಿ ನೀಡಿದರು.
ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ
ಸೆಪ್ಟಂಬರ್ 18 ರಂದು ಮೊದಲ ಹಂತದಲ್ಲಿ 24 ಕ್ಷೇತ್ರಗಳಿಗೆ ಮತದಾನ
ಸೆಪ್ಟಂಬರ್ 25 ರಂದು 2ನೇ ಹಂತದಲ್ಲಿ 26 ಕ್ಷೇತ್ರಗಳಿಗೆ ಮತದಾನ
ಅಕ್ಟೋಬರ್ 1 ರಂದು 3ನೇ ಹಂತದಲ್ಲಿ 40 ಕ್ಷೇತ್ರಗಳಿಗೆ ಮತದಾನ
ಅಕ್ಟೋಬರ್ 4 ರಂದು ಫಲಿತಾಂಶ
ಹರಿಯಾಣ ರಾಜ್ಯದ ವಿಧಾನಸಭೆ ಚುನಾವಣೆ
ಅಕ್ಟೋಬರ್ 1 ರಂದು ಹರಿಯಾಣದ 90 ಕ್ಷೇತ್ರಗಳಿಗೆ ಮತದಾನ
ಅಕ್ಟೋಬರ್ 4 ರಂದು ಮತ ಎಣಿಕೆ ನಡೆದು ಫಲಿತಾಂಶ ಘೋಷಣೆ.
ಸೆಪ್ಟಂಬರ್ 5ರಿಂದ ಚುನಾವಣೆಗೆ ಅಧಿಸೂಚನೆ ಪ್ರಕಟ
Key words: assembly elections,Jammu Kashmir, Haryana,Date announce