For the best experience, open
https://m.justkannada.in
on your mobile browser.

ಅಯೋಧ್ಯೆ ವಿಶೇಷ ರೈಲಿಗೆ ನುಗ್ಗಿ ಬೆಂಕಿ ಹಾಕುವುದಾಗಿ ಬೆದರಿಕೆ ಪ್ರಕರಣ: ಓರ್ವನ ಬಂಧನ

11:33 AM Feb 23, 2024 IST | prashanth
ಅಯೋಧ್ಯೆ ವಿಶೇಷ ರೈಲಿಗೆ ನುಗ್ಗಿ ಬೆಂಕಿ ಹಾಕುವುದಾಗಿ ಬೆದರಿಕೆ ಪ್ರಕರಣ  ಓರ್ವನ ಬಂಧನ

ವಿಜಯನಗರ, ಫೆಬ್ರವರಿ 23,2024(www.justkannada.in): ಅಯೋಧ್ಯೆ ವಿಶೇಷ ರೈಲಿಗೆ ನುಗ್ಗಿ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದವರ ಪೈಕಿ ಓರ್ವನನ್ನ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಗದಗದ ಬಳಿ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಯಾತ್ರಿಕರಿದ್ದ ಬೋಗಿಗೆ ಮೂವರು ಯುವಕರು ಹತ್ತಿದ್ದು,  ಅವರೊಂದಿಗೆ ಕಾರಣವಿಲ್ಲದೆ ವಾಗ್ವಾದಕ್ಕಿಳಿದ್ದರು. ಮಾತಿನ ಭರದಲ್ಲಿ ಕಿಡಗೇಡಿಗಳು ಬೋಗಿಗೆ ಬೆಂಕಿ ಹಚ್ಚುವುದಾಗಿ ಧಮ್ಕಿ ಹಾಕಿದ್ದರು.

ಕಿಡಿಗೇಡಿಗಳ ಹೇಳಿಕೆಯಿಂದ ಆಕ್ರೋಶಗೊಂಡ ಶ್ರೀರಾಮ ಭಕ್ತರು ಪ್ರತಿಭಟಸಿದ್ದಾರೆ.  ಎರಡು ಗಂಟೆಗಳ ಕಾಲ ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಅಯೋಧ್ಯೆ ಧಾಮ ರೈಲು ಮಾರ್ಗ ಮಧ್ಯೆ ನಿಂತಿದೆ. ಯುವಕರನ್ನು ಬಂಧಿಸುವಂತೆ ಪ್ರತಿಭಟಿಸಲಾಗಿದೆ. ಸ್ಥಳಕ್ಕೆ ವಿಜಯನಗರ ಎಸ್ಪಿ ಶ್ರೀಹರಿಬಾಬು, ಹೊಸಪೇಟೆಯ ಉಪವಿಭಾಗದ ಪೊಲೀಸ್ ಅಧಿಕಾರಿಗಳಿಂದ ಮನವೊಲಿಸಲಾಯಿತು.

ಈ ಮಧ್ಯೆ ಗದಗದಲ್ಲಿ ಓರ್ವ ಆರೋಪಿಯನ್ನ ರೈಲ್ವೆ ಪೊಲೀಸರು ಬಂಧಿಸಿದ್ದು ಉಳಿದವರಿಗಾಗಿ ಶೋಧಕಾರ್ಯನಡೆಸಿದ್ದಾರೆ ಎನ್ನಲಾಗಿದೆ.

Key words: Ayodhya -special- train -threat case: One- arrested

Tags :

.