For the best experience, open
https://m.justkannada.in
on your mobile browser.

ಎಸ್.ಟಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್: ಸಚಿವ ಬಿ.ನಾಗೇಂದ್ರ ವಜಾಗೊಳಿಸಲು ಬಿ.ವೈ ವಿಜಯೇಂದ್ರ ಆಗ್ರಹ.

02:55 PM May 28, 2024 IST | prashanth
ಎಸ್ ಟಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್  ಸಚಿವ ಬಿ ನಾಗೇಂದ್ರ ವಜಾಗೊಳಿಸಲು ಬಿ ವೈ ವಿಜಯೇಂದ್ರ ಆಗ್ರಹ

ಕಲಬುರಗಿ, ಮೇ 28,2024 (www.justkannada.in):  ಎಸ್.ಟಿ ನಿಗಮದ ಅಧಿಕಾರಿ ಚಂದ್ರ ಶೇಖರ್  ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನದಿಂದ ಬಿ.ನಾಗೇಂದ್ರರನ್ನ ವಜಾಗೊಳಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದರು.

ಈ ಕುರಿತು ಇಂದು ಮಾತನಾಡಿದ ಬಿವೈ ವಿಜಯೇಂದ್ರ,  ದೊಡ್ಡ ಹಗರಣವೊಂದು ನಡೆದಿರುವುದು ಬೆಳಕಿಗೆ ಬಂದಿದ್ದು, ಎಸ್.ಟಿ ನಿಗಮದ ಅಧಿಕಾರಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು,  ಈ ಹಿನ್ನೆಲೆಯಲ್ಲಿ ತಕ್ಷಣವೇ ಇಲಾಖೆಯ ಸಚಿವ ನಾಗೇಂದ್ರರನ್ನು ವಜಾ ಮಾಡಬೇಕು. ಇಲ್ಲದಿದ್ದರೇ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.

ಈ ಸಂಬಂಧ ಹೈಕೋರ್ಟ್ ನ್ಯಾಯಧೀಶರ ನೈತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ಈ ವಿಚಾರವಾಗಿ ನಾವು ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: B.Y. Vijayendra,Dismissal, Minister, B. Nagendra

Tags :

.