For the best experience, open
https://m.justkannada.in
on your mobile browser.

ನಾಳೆ ಮೈಸೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶ- ರಘು ಕೌಟಿಲ್ಯ.

01:06 PM Apr 20, 2024 IST | prashanth
ನಾಳೆ ಮೈಸೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶ  ರಘು ಕೌಟಿಲ್ಯ

ಮೈಸೂರು,ಏಪ್ರಿಲ್,20,2024 (www.justkannada.in):  ನಾಳೆ ಮೈಸೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಆಯೋಜನೆ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಸಮಾವೇಶ ಉದ್ಘಾಟನೆ ಮಾಡಲಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಘು ಕೌಟಿಲ್ಯ, ಹಿಂದುಳಿದ ಸಮುದಾಯಗಳು ಈ ಬಾರಿ ಬಿಜೆಪಿಯನ್ನ ಬೆಂಬಲಿಸುತ್ತವೆ. ಕಾಂಗ್ರೆಸ್ ಸರ್ಕಾರದಿಂದ ಹಿಂದುಳಿದ ಸಮುದಾಯಕ್ಕೆ ಯಾವುದೇ ಕೊಡುಗೆ ಕೊಟ್ಟಿಲ್ಲ. ಗ್ಯಾರಂಟಿ ಮೂಲಕ ಸಣ್ಣ ಸಮುದಾಯದ ಆರ್ಥಿಕ ಬೆಳವಣಿಗೆಗೆ ಹಿನ್ನೆಡೆ ಉಂಟು ಮಾಡಿದೆ. ಸಿದ್ದರಾಮಯ್ಯನವರು ನಾನು ಹಿಂದುಳಿದ ನಾಯಕ ಎನ್ನುತ್ತಾರೆ. ಆದರೆ ಹಿಂದುಳಿದ ಸಮಾಜದ ನಿಗಮಗಳಿಗೆ ಒಂದು ರೂಪಾಯಿ ಅನುದಾನ ನೀಡಿಲ್ಲ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಕೊಲೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನೂನು ಸುವ್ಯವಸ್ಧೆ ಸಂಪೂರ್ಣವಾಗಿ ಹದಗೆಟ್ಟಿದೆ. ಮೈಸೂರು ಚಾಮರಾಜನಗರ ಸೇರಿ ಎಲ್ಲಾ ಕ್ಷೇತ್ರಗಳಲ್ಲೂ ಹಿಂದುಳಿದ ಸಮುದಾಯ ಬಿಜೆಪಿ ಬೆಂಬಲಿಸುತ್ತದೆ ಎಂದು ರಘು ಕೌಟಿಲ್ಯ ತಿಳಿಸಿದರು.

ಸರ್ಕಾರದಿಂದ ಮತೀಯ ಶಕ್ತಿಗಳನ್ನ ಪೋಷಿಸುವ ಕೆಲಸ- ಬಿಜೆಪಿ ರಾಜ್ಯ ವಕ್ತಾರ ಎಂ.ಜಿ ಮಹೇಶ್

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯ ವಕ್ತಾರ ಎಂ.ಜಿ ಮಹೇಶ್, ಮತೀಯ ಶಕ್ತಿಗಳನ್ನ ಪೋಷಿಸುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಮತೀಯ ಶಕ್ತಿಗಳ ದೌರ್ಜನ್ಯ ಹೆಚ್ಚಾಗಿದೆ. ಹಿಂದೂಗಳಲ್ಲಿ ಭಯ ಹುಟ್ಟಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಟೂಲ್ ಕಿಟ್ ಗಳು ಕೆಲಸ ಮಾಡುತ್ತಿವೆ. ಹನುಮಾನ್ ಚಾಲೀಸ್ ಹೇಳಿದವರ ಮೇಲೆ ಹಲ್ಲೆ ನಡೆಯುತ್ತಿವೆ. ಜೈ ಶ್ರೀರಾಮ್ ಎಂದರೆ ಹಲ್ಲೆ ಮಾಡುತ್ತಿದ್ದಾರೆ. ಇಂತಹ ಘಟನೆಗಳಿಗೆ ಸರ್ಕಾರ ನೇರ ಹೊಣೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲ ಇವರನ್ನ ಪೋಷಿಸುವ ಕೆಲಸ ಮಾಡುತ್ತಿದ್ದಾರೆ. ಬಾಂಬ್ ಸ್ಫೋಟ ಮಾಡಿದವರನ್ನ ನಮ್ಮ ಬ್ರದರ್ಸ್ ಅನ್ನುತ್ತಾರೆ. ನೇಹಾ ಪ್ರಕರಣದಲ್ಲಿ ಜಿಹಾದಿ ಪ್ರಕರಣ ಅಲ್ಲ ಎಂದು ಸಿಎಂ ಹೇಳುತ್ತಾರೆ. ಹಿಂದೂಗಳಲ್ಲಿ ಭಯ ಮೂಡಿಸಬೇಕು, ಭಯದಿಂದ ಬದುಕುವ ನಿರ್ಮಾಣ ಮಾಡುವಂತಹ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಎಂ.ಜಿ ಮಹೇಶ್ ವಾಗ್ದಾಳಿ ನಡೆಸಿದರು.

Key words: Backward Classes, convention, Mysore, Raghu Kautilya

Tags :

.