For the best experience, open
https://m.justkannada.in
on your mobile browser.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ಜಾಮೀನು ಮಂಜೂರು.

12:32 PM Jun 01, 2024 IST | prashanth
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ಜಾಮೀನು ಮಂಜೂರು

ಬೆಂಗಳೂರು,ಜೂನ್,1,2024 (www.justkannada.in): ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ವಿರುದ್ಧದ ಅಪಪ್ರಚಾರ  ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ವಿರುದ್ದ 40% ಕಮಿಷನ್ ಮತ್ತು ಭ್ರಷ್ಟಾಚಾರದ ಆರೋಪ ಮಾಡಿದ್ದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ದ ಬಿಜೆಪಿಯಿಂದ ಖಾಸಗಿ ದೂರು ದಾಖಲಾಗಿತ್ತು.   ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಇಂದು  ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಈ ವೇಳೇ ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರಿಗೂ ಕೂಡ ಜಾಮೀನು ನೀಡಿದೆ. ಬಾಂಡ್‌ ಗೆ ಸಹಿ ಮಾಡಿದ ಬಳಿಕ ಇಬ್ಬರೂ ಕೂಡ ನ್ಯಾಯಾಲಯದಿಂದ ವಾಪಸ್ಸಾಗಿದ್ದಾರೆ.

Key words: Bail, granted, CM, Siddaramaiah, DCM, DK Shivakumar

Tags :

.