For the best experience, open
https://m.justkannada.in
on your mobile browser.

ಮಾವಿನ ಹಣ್ಣು ರಫ್ತಿನಲ್ಲಿ ದಾಖಲೆ ನಿರ್ಮಿಸಿದ ಬೆಂಗಳೂರು ವಿಮಾನ ನಿಲ್ದಾಣ

06:25 PM Aug 01, 2024 IST | prashanth
ಮಾವಿನ ಹಣ್ಣು ರಫ್ತಿನಲ್ಲಿ ದಾಖಲೆ ನಿರ್ಮಿಸಿದ ಬೆಂಗಳೂರು ವಿಮಾನ ನಿಲ್ದಾಣ

ಬೆಂಗಳೂರು,ಆಗಸ್ಟ್,1,2024 (www.justkannada.in):  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (KIAB/BLR ವಿಮಾನ ನಿಲ್ದಾಣ) ಮಾವು ರಫ್ತಿನಲ್ಲಿ ಗಮನಾರ್ಹ ಸಾಧನೆ ಮಾಡಿದೆ. 2024ನೇ ಸಾಲಿನಲ್ಲಿ 822 ಮೆಟ್ರಿಕ್ ಟನ್‌ (MT) ಮಾವಿನ ಹಣ್ಣಿನ ಸಾಗಾಟಣೆ ಮಾಡುವ ಮೂಲಕ ಈ ಬಾರಿ ಶೇ. 20 ರಷ್ಟು ಬೆಳವಣಿಗೆ ಕಂಡಿದೆ. 

ಕಳೆದ ವರ್ಷದಲ್ಲಿ 685 ಎಟ್ರಿಕ್‌ ಟನ್‌ ಮಾವಿನಹಣ್ಣನ್ನು ರಫ್ತು ಮಾಡಲಾಗಿತ್ತು. ಈ ಬಾರಿ ಒಟ್ಟು 27 ಲಕ್ಷ ಮಾವಿನ ಹಣ್ಣನ್ನು ರಫ್ತು ಮಾಡುವ ಮೂಲಕ ಹಿಂದಿನ ಋತುವಿಗೆ ಹೋಲಿಸಿದರೆ ಶೇ.59ರಷ್ಟು ಹೆಚ್ಚಳ ಕಂಡಿದೆ, ಸಾಗರೋತ್ತರ ಮಾರುಕಟ್ಟೆಗಳಲ್ಲಿ ಭಾರತೀಯ ಮಾವಿನಹಣ್ಣಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಪೆರಿಷಬಲ್‌ ಸರಕುಗಳನ್ನು ರಫ್ತು ಮಾಡುವಲ್ಲಿ BLR ವಿಮಾನ ನಿಲ್ದಾಣದ ಕಾರ್ಯಾಚರಣೆಯ ಬದ್ಧತೆಯಿಂದ ರಫ್ತು ಪ್ರಮಾಣದಲ್ಲೂ ಏರಿಕೆ ಕಾಣುತ್ತಿದೆ.

ಈ ಋತುವಿನಲ್ಲಿ, ಯುಎಸ್‌ ಗೆ ಹೆಚ್ಚು ಮಾವಿನ ಹಣ್ಣುಗಳನ್ನು ರಫ್ತು ಮಾಡಲಾಗಿದೆ. ಪ್ರಮುಖವಾಗಿ, ವಾಷಿಂಗ್ಟನ್ ಡಲ್ಲೆಸ್ (ಐಎಡಿ), ಡಲ್ಲಾಸ್-ಫೋರ್ಟ್ ವರ್ತ್ (ಡಿಎಫ್‌ಡಬ್ಲ್ಯೂ), ಮತ್ತು ಸ್ಯಾನ್ ಫ್ರಾನ್ಸಿಸ್ಕೊ (ಎಸ್‌ಎಫ್‌ಒ) ನಂತಹ ವಿಮಾನ ನಿಲ್ದಾಣಗಳು ಭಾರತೀಯ ಮಾವು ಸಾಗಣೆಗೆ ಪ್ರಮುಖ ತಾಣವಾಗಿ ಹೊರಹೊಮ್ಮಿವೆ. ಇದರ ಜೊತೆಗೆ, ಚಿಕಾಗೋ (ಒಆರ್‌ಡಿ), ಸಿಯಾಟಲ್ (ಸಿಇಎ), ದುಬೈ (ಡಿಎಕ್ಸ್‌ಬಿ), ಲಂಡನ್ (ಎಲ್‌ಎಚ್‌ಆರ್‌), ಮತ್ತು ಹೂಸ್ಟನ್ (ಐಎಎಚ್‌) ನಂತಹ ಪ್ರಮುಖ ವಿಮಾನ ನಿಲ್ದಾಣಗಳು ಸೇರಿದಂತೆ 60 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಥಳಗಳಿಗೆ ರಫ್ತು ಮಾಡಲಾಗಿದೆ. ಈ ಮೂಲಕ BLR ವಿಮಾನ ನಿಲ್ದಾಣವು ಭಾರತೀಯರ ಬೆಳೆಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ಕೃಷಿ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಗಳನ್ನು ತಲುಪಲು ಸಮರ್ಥವಾಗಿದೆ ಎಂಬುದನ್ನು ಸಾಬೀತು ಪಡಿಸಿದೆ.

ಬೆಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್‌ ನ (ಬಿಐಎಎಲ್) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಮಾತನಾಡಿ, "ಬಿಎಲ್‌ಆರ್ ಏರ್‌ಪೋರ್ಟ್‌, ತಾಂತ್ರಿಕವಾಗಿ ಸುಧಾರಿತ ಕೋಲ್ಡ್ ಸ್ಟೋರೇಜ್ ಸೌಲಭ್ಯವಾದ ಡಬ್ಲ್ಯುಎಫ್‌ಎಸ್  ಬಿಎಲ್‌ಆರ್ ಕೂಲ್‌ಪೋರ್ಟ್ ಪೂರೈಕೆಯು ಪೆರಿಷೆಬಲ್‌ ಉತ್ಪನ್ನಗಳ ಗುಣಮಟ್ಟವನ್ನು ಕಾಪಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಮಾವಿನ ರಫ್ತುಗಳನ್ನು ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚಿಸುವ ಈ ಸಾಧನೆಯು ಭಾರತೀಯ ಮಾವಿನಹಣ್ಣಿಗೆ, ವಿಶೇಷವಾಗಿ ಎರಡು ಪ್ರಮುಖ ಅಂತಾರಾಷ್ಟ್ರೀಯ ತಾಣಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಪ್ರಧಾನ ಗೇಟ್‌ವೇ ಆಗಿ ನಮ್ಮ ಸ್ಥಾನವನ್ನು ಬಲಪಡಿಸಿಕೊಂಡಿದ್ದೇವೆ ಎಂದರು.

ವ್ಯವಸ್ಥಾಪನಾ ಸಾಮರ್ಥ್ಯ, ಕಾರ್ಯತಂತ್ರದ ಪಾಲುದಾರಿಕೆ ಮತ್ತು ಕೃಷಿ ಕ್ಷೇತ್ರದ ಬೆಂಬಲದಿಂದ  BLR ವಿಮಾನ ನಿಲ್ದಾಣವು ಉತ್ತಮ ಗುಣಮಟ್ಟದ ತಾಜಾ ಉತ್ಪನ್ನಗಳ ರಫ್ತಿನಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಆರ್ಥಿಕ ಬೆಳವಣಿಗೆಯಲ್ಲೂ ತನ್ನ ಪಾತ್ರವನ್ನು ಮುಂದುವರೆಸಿಕೊಂಡು ಸಾಗಿದೆ.

Key words: Bangalore airport, record, mango, export

Tags :

.