HomeBreaking NewsLatest NewsPoliticsSportsCrimeCinema

ವರುಣನ ಆರ್ಭಟಕ್ಕೆ ಬೆಂಗಳೂರು ತತ್ತರ: ಇನ್ನೂ ಮೂರ್ನಾಲ್ಕು ದಿನ ಭಾರಿ ಮಳೆ.  

10:49 AM Nov 07, 2023 IST | prashanth

ಬೆಂಗಳೂರು,ನವೆಂಬರ್,7,2023(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಜನರು ತತ್ತರಿಸಿದ್ದು, ಮಳೆಯಿಂದ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ.

ನಿನ್ನೆ ರಾತ್ರಿ ಬೆಂಗಳೂರು ಮೈಸೂರು, ಮಂಡ್ಯ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದೆ. ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಬೆಂಗಳೂರಿನಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತ್ತು. ಅಂಡರ್​ಪಾಸ್​ಗಳಲ್ಲಿ ನೀರು ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಭಾರಿ ಮಳೆಯಾಗುತ್ತಿದ್ದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್​ ಬಿಬಿಎಂಪಿಯ ವಾರ್ ರೂಂಗೆ ದಿಢೀರ್ ಭೇಟಿ ನೀಡಿದ್ದರು.

ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಮರ ಧರೆಗುರುಳಿದಿದೆ. ಏಳು ವಲಯಗಳ ಪೈಕಿ 18 ಕಡೆ ಡ್ರೈನೇಜ್ ನೀರು ರಸ್ತೆಗೆ ಬಂದಿತ್ತು.ಈ ನಡುವೆ ನಗರದಲ್ಲಿ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಗುಡುಗು ಗಾಳಿ ಸಹಿತ ಮೂರು ದಿನಗಳ ಕಾಲ ಭಾರಿ ಮಳೆಯಾಗುತ್ತದೆ ಎಂದು ಹೇಳಿದೆ.  ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

Key words: Bangalore-Heavy rain -three -four days.

Tags :
Bangalore-Heavy rain -three -four days.
Next Article