HomeBreaking NewsLatest NewsPoliticsSportsCrimeCinema

ಮೇ 15 ರಿಂದ ಎಂಬ್ರಾಯ್ಡರಿ & ಆರಿ ವರ್ಕ್  ಉಚಿತ ತರಬೇತಿ ಆರಂಭ

06:14 PM Apr 30, 2024 IST | mahesh

 

ಬೆಂಗಳೂರು, ಏ.30 : (www.justkannada.in news ) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್‌ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿ ಮೇ 15 ರಿಂದ ಆರಂಭವಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಹೆಸರನ್ನು ನೋಂದಾಯಿಸಲು ಮೇ 08 ಕೊನೆ ದಿನ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9380162042, 9740982585 ಸಂಪರ್ಕಿಸುವಂತೆ ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

key words: Bangalore, rudest, training, jobs

 

Tags :
BangaloreJOBSrudestTraining
Next Article