For the best experience, open
https://m.justkannada.in
on your mobile browser.

ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಕಡ್ಡಾಯ- ಸಿಎಂ ಸಿದ್ಧರಾಮಯ್ಯ ಆದೇಶ.

12:08 PM Feb 13, 2024 IST | prashanth
ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಕಡ್ಡಾಯ  ಸಿಎಂ ಸಿದ್ಧರಾಮಯ್ಯ ಆದೇಶ

ಬೆಂಗಳೂರು,ಫೆಬ್ರವರಿ,13,2024(www.justkannada.in):  ಇನ್ಮುಂದೆ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಹಾಕುವುದು ಕಡ್ಡಾಯ. ಜೊತೆಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಬರೆಸಿ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಈ ಕುರಿತು  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ,  ಜಗಜ್ಯೋತಿ ಬಸವೇಶ್ವರ ಎಂದು ಪ್ರಖ್ಯಾತರಾಗಿರುವ ಬಸವಣ್ಣನವರು 12ನೇ ಶತಮಾನದ ವಚನ ಚಳುವಳಿಯ ಹಾಗೂ ಸಾಮಾಜಿಕ ನ್ಯಾಯದ ನಾಯಕತ್ವ ವಹಿಸಿದ್ದರು.

ನಮ್ಮ ಸರ್ಕಾರವು ಬಸವಣ್ಣನವರನ್ನು ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ" ಎಂದು ಘೋಷಣೆ ಮಾಡಿದೆ. ನಮ್ಮ ನಡೆ-ನುಡಿಗಳಲ್ಲಿ ಭಿನ್ನತೆ ಇರಬಾರದು ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಹಾಕುವುದು ಕಡ್ಡಾಯ ಗೊಳಿಸಲಾಗಿದ್ದು, ಜೊತೆಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬುದಾಗಿ ಅದರಲ್ಲಿ ಬರೆಸಿ ಹಾಕುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ

Key words: Basavanna- photo-mandatory - government offices- CM Siddaramaiah

Tags :

.