For the best experience, open
https://m.justkannada.in
on your mobile browser.

ಬೆಂಗಳೂರು ನಗರಾಭಿವೃದ್ದಿ: ಸಚಿವರು, ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

05:54 PM Jul 17, 2024 IST | prashanth
ಬೆಂಗಳೂರು ನಗರಾಭಿವೃದ್ದಿ  ಸಚಿವರು  ಶಾಸಕರ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

ಬೆಂಗಳೂರು, ಜುಲೈ,17,2024 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರು ನಗರ ಅಭಿವೃದ್ಧಿ ಕುರಿತು ನಗರದ ಸಚಿವರು ಹಾಗೂ ಶಾಸಕರ ಜೊತೆ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಈ ಸಭೆಯಲ್ಲಿ ಪೆರಿಫೆರಲ್ ರಿಂಗ್ ರಸ್ತೆ, ಸ್ಕೈ ಡೆಕ್ ನಿರ್ಮಾಣ, ಘನ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ, ಬೆಂಗಳೂರು ನಗರದ ಸಂಚಾರದಟ್ಟಣೆ ನಿವಾರಣೆಗಾಗಿ ಟನೆಲ್ ರಸ್ತೆ ನಿರ್ಮಾಣ ಹಾಗೂ ಹೈ ಡೆನ್ಸಿಟಿ ಕಾರಿಡಾರ್ ಅಭಿವೃದ್ಧಿ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ನಾಲ್ಕೈದು ಬಾರಿ ಟೆಂಡರ್ ಕರೆದರೂ ವಿಫಲವಾಗಿರುವುದರಿಂದ ಪೆರಿಫೆರಲ್ ರಿಂಗ್ ರಸ್ತೆ ಅಭಿವೃದ್ಧಿಗೆ ವಿವಿಧ ಸಾಧ್ಯತೆಗಳು ಹಾಗೂ ಸಂಪನ್ಮೂಲ ಕ್ರೋಢೀಕರಣ ದ ಅವಕಾಶಗಳನ್ನು ಪರಿಶೀಲಿಸಿ ವಿವರವಾದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಸೂಚಿಸಿದರು.  ಇದಲ್ಲದೆ ನಗರದಲ್ಲಿ ವೈಜ್ಞಾನಿಕ ಘನತ್ಯಾಜ್ಯ ವಿಲೇವಾರಿ ಹಾಗೂ ಆಯವ್ಯಯದಲ್ಲಿ ಘೋಷಿಸಿದಂತೆ ಸಂಚಾರ ದಟ್ಟಣೆ ನಿವಾರಣೆಗೆ ಟನೆಲ್ ರಸ್ತೆಗಳ ನಿರ್ಮಾಣ ಅಭಿವೃದ್ಧಿ ಹಾಗೂ ರಾಜಕಾಲುವೆಗಳ ಬಫರ್ ಜೋನ್ ನಲ್ಲಿ ರಸ್ತೆಗಳ ನಿರ್ಮಾಣ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ನಗರದ ಸಚಿವರಾದ ರಾಮಲಿಂಗಾ ರೆಡ್ಡಿ,  ಕೆ ಜೆ ಚಾರ್ಜ್, ಕೃಷ್ಣ ಬೈರೇಗೌಡ,  ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್‌. ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Key words: Bengaluru Urban, Development, CM Siddaramaiah, discussion

Tags :

.