ರಾಜಸ್ಥಾನದ ನೂತನ ಸಿಎಂ ಆಗಿ ಭಜನ್ ಲಾಲ್ ಶರ್ಮಾ ಪ್ರಮಾಣ ವಚನ ಸ್ವೀಕಾರ.
01:19 PM Dec 15, 2023 IST
|
prashanth
ಜೈಪುರ,ಡಿಸೆಂಬರ್,15,2023(www.justkannada.in): ರಾಜಸ್ಥಾನದ ನೂತನ ಸಿಎಂ ಆಗಿ ಭಜನ್ ಲಾಲ್ ಶರ್ಮಾ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಜೈಪುರ ಆಲ್ಬರ್ಟ್ ಹಾಲ್ ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ, ಉಪಮುಖ್ಯಮಂತ್ರಿಯಾಗಿ ದಿವ್ಯಕುಮಾರಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಕಾಲರಾಜ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ , ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಕೇಂದ್ರಸಚಿವರಾದ ರಾಜನಾಥ್ ಸಿಂಗ್, ಬಿಜೆಪಿ ಆಡಳಿತವಿರುವ ಸಿಎಂಗಳು ಉಪಸ್ಥಿತರಿದ್ದರು.
Key words: Bhajan Lal Sharma -sworn - new CM - Rajasthan
Next Article