ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್ : ನಿರೀಕ್ಷಣಾ ಜಾಮೀನು ಮಂಜೂರು.
11:29 AM Jun 07, 2024 IST
|
prashanth
ಬೆಂಗಳೂರು,ಜೂನ್,7,2024 (www.justkannada.in): ಸಂತ್ರಸ್ತ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಜಾಮೀನು ನೀಡಲು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ಹೈಕೊರ್ಟ್ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜೂನ್ 14ರವರೆಗೆ ಮಾತ್ರ ಜಾಮೀನು ನೀಡಿದೆ. ಇನ್ನು ಮಧ್ಯಾಹ್ನ 1 ಗಂಟೆಯೊಳಗೆ ಎಸ್ ಐಟಿ ವಿಚಾರಣೆಗೆ ಹಾಜರಾಗಬೇಕು. ಕೆಆರ್ ನಗರ ಪ್ರವೇಶಿಸದಂತೆ ಭವಾನಿ ರೇವಣ್ಣಗೆ ಷರತ್ತು ವಿಧಿಸಿ ಹೈಕೋರ್ಟ್ ವಿಚಾರಣೆಯನ್ನ ಮುಂದೂಡಿಕೆ ಮಾಡಿದೆ.
Key words: Bhavani Revanna, bail, granted
Next Article