HomeBreaking NewsLatest NewsPoliticsSportsCrimeCinema

ಬೈಕ್ ಲಾರಿ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

10:54 AM Jun 15, 2024 IST | prashanth

ಚಾಮರಾಜನಗರ,ಜೂನ್,15,2024 (www.justkannada.in): ಬೈಕ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಬಳಿ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರು ಗ್ರಾಮದ ಅರಣ್ (34) ಮೃತ ವ್ಯಕ್ತಿ.  ಅರುಣ್ ಗುಂಡ್ಲುಪೇಟೆಯಿಂದ ಮೈಸೂರಿನತ್ತ ತೆರಳುತ್ತಿದ್ದನು.  ಲಾರಿ ತರಕಾರಿ ಲೋಡ್ ಹೊತ್ತು ಮೈಸೂರಿನಿಂದ ಕೇರಳಕ್ಕೆ ಹೋಗುತ್ತಿತ್ತು.

ಓವರ್ ಟೇಕ್ ಮಾಡುವ ಬರದಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಅರುಣ್ ಸಾವನ್ನಪ್ಪಿದ್ದಾನೆ. ಈ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Bike- lorry- collision- rider -died

Tags :
bike-collisiondiedlorryrider
Next Article