For the best experience, open
https://m.justkannada.in
on your mobile browser.

ಬಿಲ್ಕಸ್ ಬಾನು ಅತ್ಯಾಚಾರ ಪ್ರಕರಣ: ಗುಜರಾತ್ ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್.

12:05 PM Jan 08, 2024 IST | prashanth
ಬಿಲ್ಕಸ್ ಬಾನು ಅತ್ಯಾಚಾರ ಪ್ರಕರಣ  ಗುಜರಾತ್ ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ, ಜನವರಿ,8,2024(www.justkannada.in):  ಬಿಲ್ಕಸ್ ಬಾನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಪ್ರಕರಣ ಸಂಬಂಧ 2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು 11 ಅಪರಾಧಿಗಳನ್ನು ಬಿಡುಗಡೆ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಅವರು ಸುಪ್ರೀಂ ಮೆಟ್ಟಿಲೇರಿದ್ದರು. 2002ರ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಮಗು ಮತ್ತು ಕುಟುಂಬದವರನ್ನು ಕೊಂದ 11 ಅಪರಾಧಿಗಳನ್ನು ಬಿಡುಗಡೆ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ಮುಂದುವರಿಯುವುದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನ ರದ್ದುಗೊಳಿಸಿದೆ. ಗುಜರಾತ್ ಸರ್ಕಾರವು 11 ಅಪರಾಧಿಗಳ ಬಿಡುಗಡೆ ಮಾಡಲು ಸಮರ್ಥವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.  ಈ ಮೂಲಕ 11  ಅಪರಾಧಿಗಳಿಗೆ ಮತ್ತೆ ಮತ್ತೆ ಜೈಲೇ ಗತಿಯಾಗಿದೆ.

Key words: Bilkus Banu- rape –case- Gujarat government's -order -quashed - Supreme Court.

Tags :

.