HomeBreaking NewsLatest NewsPoliticsSportsCrimeCinema

ಬಿಜೆಪಿಯ ಭ್ರಷ್ಟಾಚಾರದ ಆರೋಪಕ್ಕೆ ವಿಧಾನಸಭೆ ಅಧಿವೇಶನದಲ್ಲಿ ಉತ್ತರ : ಸಿಎಂ ಸಿದ್ದರಾಮಯ್ಯ.

03:45 PM Nov 18, 2023 IST | prashanth

ಮೈಸೂರು, ನವೆಂಬರ್,18,2023(www.justkannada.in):  ರಾಜ್ಯದಲ್ಲಿ  ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ.  ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಬಿಜೆಪಿಯ ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ ಎಂದರು.

ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾ

ಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರಶಿಕ್ಷಣಾಧಿಕಾರಿಗಳಾಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು  ಪೋಲಿಸ್ ಅಧಿಕಾರಿ ಬಗ್ಗೆಯಲ್ಲ,  ವಿವಿಪುರಂ ಇನ್ಸ್ ಪೆಕ್ಟರ್  ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ  ಬಗ್ಗೆ ಸ್ಥಳೀಯ ಶಾಸಕರನ್ನು ಕೇಳಲಿ ಎಂದರು.

ಆತಂಕದಿಂದ ಅರ್ಥವಿಲ್ಲದ ಹೇಳಿಕೆಗಳು:

ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಸುಳ್ಳು ಆರೋಪಗಳಿಗೆ ಉತ್ತರ ನೀಡುವುದಿಲ್ಲ:

ಕಾಂಗ್ರೆಸ್ ನವರು ಕೌರವ ಸಂಸ್ಕೃತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸುತ್ತಾ, ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ ಎಂದರು.

ಮೈಸೂರು ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದ್ದು, ಚುನಾವಣೆ ನಡೆಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಚಿಕ್ಕದಾದರೂ ಅಪರಾಧ ಅಪರಾಧವೇ :

ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಪೆನ್ ಡ್ರೈವ್ ಹೇಳಿಕೆಯ ನಂತರ ವಿಧಾನಸಭೆ ಅಧಿವೇಶನ ನಡೆದರೂ, ಅದರ ಬಗ್ಗೆ ಅವರು ಪ್ರಸ್ತಾಪ ಮಾಡಲಿಲ್ಲವೇಕೆ? ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಮನವಿ ಮಾಡಿದವರು ಯಾರು ಎಂಬ ಮಾಹಿತಿಯನ್ನು ನೀಡಲಿ. ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಚಿಕ್ಕದಾದರೂ ಅಪರಾಧ ಅಪರಾಧವೇ ಎಂದರು.

ರಾಜ್ಯಾಧ್ಯಕ್ಷರ ನೇಮಕದಿಂದ ಬಿಜೆಪಿಯ ನಾಯಕರಲ್ಲಿ ಅಸಮಧಾನ :

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ಅನೇಕ ನಾಯಕರು ಅಸಮಾಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿಯನ್ನು ಎಲ್ಲರೂ ನೋಡಬಹುದು ಎಂದರು.

Key words: BJP-allegations  - assembly- session-CM Siddaramaiah

ENGLISH SUMMARY...

Dissatisfaction among BJP leaders regarding appointment of state president:

Will reply to BJP's allegations in the assembly session: Chief Minister Siddaramaiah

Mysore, November 18: Chief Minister Siddaramaiah said that the government is creating a peaceful atmosphere in the state without indulging in hate politics. He said that a fitting reply will be given in the upcoming assembly session to the allegations of corruption made by the BJP against the government.

He was speaking to the media in Mysore today.

Commenting on the election of BJP's R.Ashok as the leader of the opposition, the chief Minister said that " we are not worried about who is the opposition leader. Our Congress government, which has formed the government with the blessings of the people, is fulfilling the promises it made to the people. He said that the government is creating a peaceful atmosphere in the state without indulging in hate politics.

In response to former CM Kumaraswamy's tweet about the transfer of Vivekananda, the CM said that Vivekananda is the Block Education Officer of Mysore Rural taluk. Kumaraswamy has spoken about him and not about V.V.Puram , Bengaluru's Inspector Vivekananda who is transferred to Chamarajanagar district
The CM said that they can verify the same with the local MLA.

Making nonsensical statements out of anxiety:

Reacting to BJP's poster movement against Congress,the CM said that people have taught BJP a proper lesson. The BJP and JDS had dreamed of forming a coalition government . But the fact that Congress won 136 seats has made them anxious and they are making meaningless statements , the CM said.

Will not respond to false accusations:

Responding to Kumaraswamy's statement that Congress showing Kaurava culture towards him, the CM said Kumaraswamy has never proved his allegations. He is into politics of hatred and jealousy. JD(S) who got 38 seats has now come down to 19 seats. There is no need to reply to their false accusations, he said.

 

Responding to a question on the term of local bodies of Mysore which has ended, the CM said that a suitable decision will be taken after discussing the matter.

A crime, however minor, is a crime:

Responding to Kumaraswamy's statement that there was a lot of information in the Pendrive and the ruling party had asked him not to reveal it, the CM said " why did he not mention it even though the assembly session was held after his pen drive statement? let him provide information about who requested non-disclosure of the pen drive. Kumaraswamy, who has stolen power as a former chief minister, has no moral right to make such statements. He has accepted the crime of electricity theft by paying fine" The CM said that "a crime is a crime even if it is small"

Dissatisfaction among BJP leaders with regard to appointment of State president:

Responding to former CM Yediyurappa's statement that BJP will come back to power even if the elections are held today, the CM said that "he is sitting in the opposition party after getting only 66 seats in the elections. His son Vijayendra has been made the party's state president, leaving many of his party leaders unhappy" He said that everyone will witness BJP's situation shortly.

Tags :
allegationsAssemblyBJPCM Siddaramaiahsession
Next Article