ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಯವರಿಂದ ಸಾಧ್ಯವಿಲ್ಲ- ಸಿಎಂ ಸಿದ್ಧರಾಮಯ್ಯ
01:22 PM Oct 28, 2023 IST
|
prashanth
ಬೆಂಗಳೂರು ಅಕ್ಟೋಬರ್,28,2023(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರವನ್ನ ಅಸ್ಥಿರಗೊಳಿಸಲು ಬಿಜೆಪಿಯವರಿಗೆ ಸಾಧ್ಯವಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.
ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಆಪರೇಷನ್ ಕಮಲ ಬಗ್ಗೆ ನನಗೆ ಗೊತ್ತಿಲ್ಲ, ಶಾಸಕ ರವಿ ಗಣಿಗ ಜತೆ ಮಾತನಾಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ ಎಂದು ಮಾಹಿತಿ ಇತ್ತು. ಆದರೆ ಬಿಜೆಪಿಯವರಿಗೆ ಅದು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದರು.
ಕಾಂಗ್ರೆಸ್ , ಜೆಡಿಎಸ್ ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಶಾಸಕರನ್ನ ಸಂಪರ್ಕಿಸುತ್ತಿದ್ದಾರೆ. ಸ್ಪೆಷಲ್ ಫೈಟ್ ಮಾಡುತ್ತೇವೆ, ಅಮಿತ್ ಶಾ ಅವರನ್ನು ಮೀಟ್ ಮಾಡಿಸುತ್ತೇವೆ. 50 ಕೋಟಿ ರೂಪಾಯಿ ಕೊಡುತ್ತೇವೆ. ಮಂತ್ರಿ ಮಾಡುತ್ತೇವೆ ಅಂತಾ ಹೇಳಿ ಅಮಿಷ ಒಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರವಿ ಗಣಿಗ ಆರೋಪ ಮಾಡಿದ್ದರು.
Key words: BJP -cannot -destabilize - government- CM Siddaramaiah
Next Article