For the best experience, open
https://m.justkannada.in
on your mobile browser.

ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ದ ಬಿಜೆಪಿ ದೂರು.

04:26 PM Apr 10, 2024 IST | prashanth
ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ದ ಬಿಜೆಪಿ ದೂರು

ಬೆಂಗಳೂರು, ಏಪ್ರಿಲ್,10,2024 (www.justkannada.in):  ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ.ಎಸ್ ಈಶ್ವರಪ್ಪ ಪ್ರಧಾನಿ ನರೇಂದ್ರ ಮೋದಿ ಫೋಟೊ ಮತ್ತು ಹೆಸರು ಬಳಸದಂತೆ ನಿರ್ಬಂಧ ಹೇರುವಂತೆ ಕೋರಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ವಿಧಾನಪರಿಷತ್ ಸದಸ್ಯ ಛಲವಾದಿ ನಾಯರಾಣಸ್ವಾಮಿ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ.  ಕೆ.ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಆದರೂ   ಪ್ರಚಾರ ವೇಳೆ ಮೋದಿ ಭಾವಚಿತ್ರ ಮತ್ತು ಹೆಸರು ಬಳಕೆ ಮಾಡುತ್ತಿದ್ದು ಇದಕ್ಕೆ ನಿರ್ಬಂಧ ವಿಧಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಶಿವಮೊಗ್ಗ ಬಿಜೆಪಿ ಅಭ್ಯರ್ಥಿಯಾಗಿ ರಾಘವೇಂದ್ರ ಇದ್ದಾರೆ. ಆದರೆ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಕೆ.ಎಸ್ ಈಶ್ವರಪ್ಪ ಪ್ರಧಾನಿ ಮೋದಿ ಪೋಟೊ  ಹೆಸರು ಬಳಕೆ ಮಾಡುತ್ತಿದ್ದಾರೆ. ಇದು ಹೀಗೆ ಮುಂದುವರೆದರೇ ಕಾನೂನು ರೀತಿಯಲ್ಲಿ ಕ್ರಮ ಎದುರಿಸಬೇಕಾಗುತ್ತದೆ.  ಮೋದಿ ಪೋಟೊ ಬಳಕೆ ಮಾಡಬಾರದು ಎಂದು ದೂರು ಸಲ್ಲಿಸಿದ್ದೇವೆ ಎಂದರು.

Key words: BJP, complaint, KS Eshwarappa

Tags :

.