For the best experience, open
https://m.justkannada.in
on your mobile browser.

ಸಚಿವ ನಾಗೇಂದ್ರ ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ- ಆರ್.ಅಶೋಕ್

05:18 PM Jun 03, 2024 IST | prashanth
ಸಚಿವ ನಾಗೇಂದ್ರ ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ  ಆರ್ ಅಶೋಕ್

ಬೆಂಗಳೂರು,ಜೂನ್,3,2024 (www.justkannada.in):  ಎಸ್ ಟಿ  ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ  ಸಚಿವ ನಾಗೇಂದ್ರ ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್  ತಿಳಿಸಿದ್ದಾರೆ.

 ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಆರ್ ಅಶೋಕ್, ಕಾಂಗ್ರೆಸ್ ಸರಕಾರ  ಎಸ್ ಟಿ ನಿಗಮದ 187 ಕೋಟಿ ಹಣವನ್ನು ನುಂಗಿ ನೀರು ಕುಡಿದಿದೆ. ಸಿದ್ದರಾಮಯ್ಯನವರು ಸಚಿವರ ರಾಜೀನಾಮೆ ಪಡೆಯದೆ ಭಂಡತನ ಮೆರೆಯುತ್ತಿದ್ದಾರೆ.  ಲೂಟಿ ಮಾಡಲು ಸಿದ್ದರಾಮಯ್ಯ ಯಾರು..? ಲೂಟಿ ಆಗಿದೆ ಅಂತಾ ಪ್ರದಾನ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.  ಸಿದ್ದರಾಮಯ್ಯರಂತಹ ಭಂಡ ಮತ್ತೊಬ್ಬರಿಲ್ಲ. ಇದು ಮಾನಮರ್ಯಾದೆ ಇಲ್ಲದ ಸರ್ಕಾರ . ನಮ್ಮದು ಒಂದು ದಿನದ ಹೋರಾಟ ಅಲ್ಲ . ತಲೆದಂಡ ಆಗುವವರೆಗೂ ಬಿಡಲ್ಲ ಎಂದು ಹೇಳಿದರು.

ಕಾಂಗ್ರೆಸ್ಸಿಗರು ಒಂದು ದಿನದ ಹೋರಾಟಕ್ಕೆ ಬಗ್ಗುವುದಿಲ್ಲ. ಆದ್ದರಿಂದ ರಾಜ್ಯಪಾಲರ ಭೇಟಿ, ಶಾಸಕರಿಂದ ಗಾಂಧಿ ಪ್ರತಿಮೆ ಎದುರು ಹೋರಾಟ, ಜಿಲ್ಲೆ, ಜಿಲ್ಲೆಗಳಲ್ಲಿ ಹೋರಾಟ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ ಎಂದು  ಆರ್ ಅಶೋಕ್ ತಿಳಿಸಿದರು.

Key words: BJP, fight, Minister Nagendra, resigns , R. Ashok

Tags :

.