HomeBreaking NewsLatest NewsPoliticsSportsCrimeCinema

ಬಿಜೆಪಿ ಇಬ್ಬರು ಶಾಸಕರ ವಿರುದ್ದ FIR ದಾಖಲು.

10:31 AM Feb 15, 2024 IST | prashanth

ಮಂಗಳೂರು, ಫೆಬ್ರವರಿ,15,2024(www.justkannada.in): ಕೋಮು ಪ್ರಚೋದನೆ ನಡೆಸಿದ ಆರೋಪದ ಮೇಲೆ ಬಿಜೆಪಿಯ ಇಬ್ಬರು ಶಾಸಕರ ವಿರುದ್ದ  ಪಾಂಡೇಶ್ವರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್  ದಾಖಲಾಗಿದೆ. ಅನಿಲ್ ಜೆರಾಲ್ಡ್ ಲೋಬೋ ಎಂಬುವವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿ ಶ್ರೀರಾಮನ ಬಗ್ಗೆ  ಹಿಂದೂ ಧರ್ಮದ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಶಾಲೆ ಎದುರು ಪ್ರತಿಭಟನೆ ನಡೆಸಲಾಗಿತ್ತು. ಇದಕ್ಕೆ ಮಣಿದು ಶಿಕ್ಷಕಿಯನ್ನ ಆಡಳಿತ ಮಂಡಳಿ ಅಮಾನತು ಮಾಡಿತ್ತು.

ಈ ಸಂಬಂಧ ಶಾಲೆಯ ಮುಂದೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದು, ಕೋಮು ಪ್ರಚೋದನೆ ನಡೆಸಲಾಗಿದೆ. ಶಾಲೆ ಆಡಳಿತ ಮಂಡಳಿ ನಿಯಮ ಉಲ್ಲಂಘಿಸುವಂತೆ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡಿದ್ದಾರೆ. ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಹಿಂದೂ, ಕ್ರೈಸ್ತರ ನಡುವೆ ಗಲಭೆ ಸೃಷ್ಟಿಸಲು ಪ್ರಚೋದಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.

Key words: BJP- files- FIR -against –two- MLAs.

Tags :
BJP- files- FIR -against –two- MLAs
Next Article